ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿತ್ತೀಯ ಕೊರತೆ ಗುರಿ ಪರಿಷ್ಕರಣೆ ಇಲ್ಲ’

Last Updated 19 ನವೆಂಬರ್ 2019, 18:46 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಸಕ್ತ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆ ಗುರಿ (ಶೇ 3.3) ಪರಿಷ್ಕರಣೆ ಮಾಡುವ ಆಲೋಚನೆ ಇಲ್ಲ’ ಎಂದುಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರುಸ್ಪಷ್ಟಪಡಿಸಿದ್ದಾರೆ.

ಕಾರ್ಪೊರೇಟ್‌ ತೆರಿಗೆ ದರ ಕಡಿತದಿಂದ ವಿತ್ತೀಯ ಕೊರತೆ ಹಿಗ್ಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.

‘ವಿತ್ತೀಯ ಕೊರತೆ, ಸಾಲ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಘೋಷಿಸಿರುವ ಗುರಿಯಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. ವಾರ್ಷಿಕ ಬಜೆಟ್‌ಗೂ ಮುನ್ನವೇ ನಿರ್ಧಾರಕ್ಕೆ ಬರಲಾಗುವುದು’ ಎಂದು ಅವರು ಹೇಳಿದ್ದಾರೆ..

ಹೂಡಿಕೆ ಆಕರ್ಷಣೆ: ‘ಕಾರ್ಪೊರೇಟ್‌ ತೆರಿಗೆ ದರ ಇಳಿಕೆಯಿಂದ ಆ್ಯಪಲ್‌ನಂತಹ ದೈತ್ಯ ಕಂಪನಿಗಳು ಭಾರತದಲ್ಲಿ ತಯಾರಿಕಾ ಘಟಕ ಸ್ಥಾಪನೆಗೆ ಸೂಕ್ತ ಅವಕಾಶ ಒದಗಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT