ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ಸಾಲ ಕೊಡದಂತೆ ಬ್ಯಾಂಕ್‌ಗಳಿಗೆ ಹೇಳಿಲ್ಲ: ನಿರ್ಮಲಾ

Last Updated 30 ನವೆಂಬರ್ 2021, 18:24 IST
ಅಕ್ಷರ ಗಾತ್ರ

ನವದೆಹಲಿ: ಪೊಲೀಸರು, ರಾಜಕಾರಣಿಗಳು ಮುಂತಾದ ‘ಪ್ರಭಾವಿ’ ವರ್ಗದವರಿಗೆ ಸಾಲ ನೀಡದೇ ಇರುವಂತೆ ಬ್ಯಾಂಕ್‌ಗಳಿಗೆ ಯಾವುದೇ ನಿರ್ದಿಷ್ಟ ನಿರ್ದೇಶನಗಳನ್ನು ನೀಡಲಾಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯಸಭೆಗೆ ಸ್ಪಷ್ಟಪಡಿಸಿದ್ದಾರೆ.

ಬ್ಯಾಂಕ್‌ಗಳು ‘ಕೆವೈಸಿ’ ಮತ್ತು ಇತರೆ ರೇಟಿಂಗ್ಸ್‌ಗಳ ಮೂಲಕ ಇಂತಹ ವರ್ಗದವರಿಗೆ ಸಾಲ ನೀಡುವ ಕುರಿತು ಮೌಲ್ಯಮಾಪನ ಮಾಡಬಹುದು ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ರಾಜಕಾರಣಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ಸಮಸ್ಯೆ ಹೊಂದಿವೆ. ಇಂತಹ ಗ್ರಾಹರಿಗೆ ಸಾಲ ನೀಡುವ ಮೊದಲು ಬ್ಯಾಂಕ್‌ಗಳು ದಾಖಲೆಗಳನ್ನು ನೋಡುತ್ತವೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೃಷ್ಣರಾವ್ ಕರಾಡ್ ತಿಳಿಸಿದ್ದಾರೆ.

ಕ್ರಿಪ್ಟೊಕರೆನ್ಸಿ ಕುರಿತು ಹೊಸ ಮಸೂದೆಯ ಬಗ್ಗೆ ಕೇಂದ್ರ ಸರ್ಕಾರವು ಕೆಲಸ ಮಾಡುತ್ತಿದ್ದು ಕೇಂದ್ರ ಸಚಿವ ಸಂಪುಟದ ಒಪ್ಪಿಗೆಯ ಬಳಿಕ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT