ಚೆನ್ನೈ: ಇಲ್ಲಿನ ಫೋನ್ ತಯಾರಿಕ ಘಟಕದಲ್ಲಿನ ಕೆಲವು ಉದ್ಯೋಗಿಗಳಿಗೆ ಕೊರೊನಾ ವೈರಸ್ ಸೋಂಕು ಹರಡಿರುವ ಕಾರಣ
ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ.

ಕಳೆದ ವಾರ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ
ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ.

ಈ ಘಟಕದಲ್ಲಿ ಎಷ್ಟು ಜನರಿಗೆ ಸೋಂಕು ಹರಡಿದೆ ಎಂಬುದನ್ನು ಕಂಪನಿ ತಿಳಿಸಿಲ್ಲ. ಆದರೆ 42 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು
ಕಂಪನಿಯ ಬಲ್ಲ ಮೂಲಗಳು ತಿಳಿಸಿವೆ.

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲಿ ಮತ್ತೆ ಕಾರ್ಯಾರಂಭ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.

ಕಳೆದ ವಾರ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಕಂಪನಿ ಕೂಡ ನೌಕರರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.