ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಎಸ್‌ಟಿಗೆ ಪೆಟ್ರೋಲಿಯಂ ಉತ್ಪನ್ನ: ಮುಂದಿನ 10 ವರ್ಷಗಳಲ್ಲಿಯೂ ಕಷ್ಟ

Published : 25 ಮಾರ್ಚ್ 2021, 3:41 IST
ಫಾಲೋ ಮಾಡಿ
Comments

ನವದೆಹಲಿ: ‘ಪೆಟ್ರೋಲ್‌, ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಮುಂದಿನ ಎಂಟರಿಂದ 10 ವರ್ಷಗಳವರೆಗೆ ಸಾಧ್ಯವಿಲ್ಲ. ಏಕೆಂದರೆ ವಾರ್ಷಿಕ ₹ 2 ಲಕ್ಷ ಕೋಟಿ ವರಮಾನ ನಷ್ಟ ಎದುರಿಸಲು ಯಾವ ರಾಜ್ಯವೂ ಸಿದ್ಧವಿಲ್ಲ’ ಎಂದು ಬಿಜೆಪಿ ಸದಸ್ಯ ಸುಶೀಲ್ ಕುಮಾರ್‌ ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದ ಒಟ್ಟಾರೆಯಾಗಿ ₹ 5 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತ ಸಂಗ್ರಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

‘ಪ್ರತಿಪಕ್ಷಗಳ ನಾಯಕರಿಗೆ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವುದು ಬಹಳ ಸುಲಭ. ಆದರೆ, ಜಿಎಸ್‌ಟಿ ಮಂಡಳಿಯ ಎದುರು ಯಾರೊಬ್ಬರೂ ವಿಷಯ ಪ್ರಸ್ತಾಪಿಸುವುದೇ ಇಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT