ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಬಹುದು ಎನ್‌ಪಿಎ ಪ್ರಮಾಣ

Last Updated 24 ಜುಲೈ 2020, 18:39 IST
ಅಕ್ಷರ ಗಾತ್ರ

ಮುಂಬೈ: ಬ್ಯಾಂಕುಗಳಲ್ಲಿನ ವಸೂಲಾಗದ ಸಾಲದ (ಎನ್‌ಪಿಎ) ಒಟ್ಟು ಪ್ರಮಾಣವು ಈ ಆರ್ಥಿಕ ವರ್ಷದ ಅಂತ್ಯದ ವೇಳೆಗೆ
ಶೇಕಡ 12.5ರಷ್ಟಕ್ಕೆ ಹೆಚ್ಚಳ ಆಗಬಹುದು ಎಂದು ಆರ್‌ಬಿಐ ಹಣಕಾಸು ಸ್ಥಿರತೆ ವರದಿಯಲ್ಲಿ ಅಂದಾಜಿಸಲಾಗಿದೆ. ಈ ವರದಿ
ಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

2020ರ ಮಾರ್ಚ್‌ ಅಂತ್ಯದ ವೇಳೆಗೆ ಒಟ್ಟು ಎನ್‌ಪಿಎ ಪ್ರಮಾಣವು ಶೇಕಡ 8.5ರಷ್ಟು ಇತ್ತು. ಪರಿಸ್ಥಿತಿ ತೀರಾ ಬಿಗಡಾಯಿಸಿದರೆ, ಎನ್‌ಪಿಎ ಪ್ರಮಾಣವು ಗರಿಷ್ಠ ಶೇಕಡ 14.7ರಷ್ಟು ಆಗಬಹುದು ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ.

ಕೋವಿಡ್‌–19 ಕಾರಣದಿಂದಾಗಿ ಘೋಷಿಸಲಾಗಿರುವ ಸಾಲದ ಕಂತು ಕಟ್ಟುವಿಕೆ ಮುಂದೂಡಿಕೆ ಯೋಜನೆಯ ಪರಿಣಾಮ ಏನಾಗುತ್ತದೆ ಎಂಬುದನ್ನು ಖಚಿತವಾಗಿ ಅಂದಾಜಿಸುವುದು ಕಷ್ಟ ಎಂದು ವರದಿ ಹೇಳಿದೆ.

ಸಾಂಕ್ರಾಮಿಕದ ಕಾರಣ ಎನ್‌ಪಿಎ ಪ್ರಮಾಣ ಹೆಚ್ಚಾಗ ಬಹುದು ಎಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅವರೂ ಈಚೆಗೆ ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT