ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಗುರಿ- ಎನ್‌ಟಿಪಿಸಿ

Published 7 ಏಪ್ರಿಲ್ 2024, 13:56 IST
Last Updated 7 ಏಪ್ರಿಲ್ 2024, 13:56 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್‌ಟಿಪಿಸಿ) 2024–25ನೇ ಹಣಕಾಸು ವರ್ಷದಲ್ಲಿ ತನ್ನ ಒಡೆತನಕ್ಕೆ ಸೇರಿದ ಗಣಿಗಳಿಂದ 4 ಕೋಟಿ ಟನ್‌ನಷ್ಟು ಕಲ್ಲಿದ್ದಲು ಉತ್ಪಾದಿಸುವ ಗುರಿ ಹೊಂದಿದೆ. 

ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 17ರಷ್ಟು ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಮಾರ್ಚ್‌ ಅಂತ್ಯಕ್ಕೆ ಗಣಿ ಪ್ರದೇಶದಿಂದ 3.41 ಕೋಟಿ ಟನ್‌ನಷ್ಟು ಕಲ್ಲಿದ್ದಲು ಸಾಗಣೆ ಮಾಡಿದ್ದು, 3.43 ಕೋಟಿ ಟನ್‌ನಷ್ಟು ಉತ್ಪಾದಿಸಲಾಗಿದೆ ಎಂದು ತಿಳಿಸಿದೆ. 

ಕಲ್ಲಿದ್ದಲು ಉತ್ಪಾದನೆಯಲ್ಲಿ ಸುಸ್ಥಿರತೆ ಸಾಧಿಸಲು ಹಲವು ಕಾರ್ಯವಿಧಾನ ಹಾಗೂ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. 

ಗಣಿ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಿದೆ. ಗಣಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಲವು ಸುಧಾರಣಾ ಕ್ರಮಕೈಗೊಂಡಿದೆ. ಸ್ವಯಂಚಾಲಿತ ಉಪಕರಣಗಳ ಬಳಕೆಯ ಜೊತೆಗೆ ಕಾರ್ಮಿಕರಿಗೆ ಅಗತ್ಯ ತರಬೇತಿ ಕೂಡ ನೀಡುತ್ತಿದೆ. ಗಣಿಗಾರಿಕೆಯ ಮೇಲ್ವಿಚಾರಣೆ ಮತ್ತು ವಿಶ್ಲೇಷಣಾ ವಿಧಾನವನ್ನು ಅನುಸರಿಸುತ್ತಿದೆ ಎಂದು ತಿಳಿಸಿದೆ. 

ಕಂಪನಿಯು ತನ್ನ ಸಾಮರ್ಥ್ಯ ಹೆಚ್ಚಳಕ್ಕೆ ಅನುಗುಣವಾಗಿ ನವೀನ ತಂತ್ರಜ್ಞಾನ ಮತ್ತು ಸುಸ್ಥಿರ ಕಾರ್ಯ ಚಟುವಟಿಕೆಗೆ ಆದ್ಯತೆ ನೀಡಿದೆ. ಆ ಮೂಲಕ ರಾಷ್ಟ್ರದ ಇಂಧನ ಉತ್ಪಾದನಾ ಗುರಿಗೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT