ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಟಿಪಿಸಿ ನಿವ್ವಳ ಲಾಭ ಶೇ 5ರಷ್ಟು ಹೆಚ್ಚಳ

Last Updated 28 ಜನವರಿ 2023, 11:11 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ (ಎನ್‌ಟಿಪಿಸಿ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹4,854 ಕೋಟಿಯಷ್ಟು ಆಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹4,626 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ 5ರಷ್ಟು ಏರಿಕೆ ಆಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ವರಮಾನ ಹೆಚ್ಚಾಗಿರುವುದೇ ಲಾಭದಲ್ಲಿನ ಏರಿಕೆಗೆ ಮುಖ್ಯ ಕಾರಣ ಎಂದು ಅದು ತಿಳಿಸಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ವರಮಾನವು ₹33,783 ಕೋಟಿಯಿಂದ ₹44,989 ಕೋಟಿಗೆ ಏರಿಕೆ ಆಗಿದೆ.

ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರು 2022–23ನೇ ಹಣಕಾಸು ವರ್ಷಕ್ಕೆ ₹10ರ ಮುಖಬೆಲೆಯ ಪ್ರತಿ ಷೇರಿಗೆ ₹4.25ರಷ್ಟು ಮಧ್ಯಂತರ ಲಾಭಾಂಶ ನೀಡಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT