ಭಾನುವಾರ, ಸೆಪ್ಟೆಂಬರ್ 19, 2021
24 °C

ಎನ್‌ಟಿಪಿಸಿ ಲಾಭ ಶೇ 17ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್‌ಟಿಪಿಸಿ) ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹ 3,444 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೆ ಅವಧಿಗೆ ಕಂಪನಿಯ ನಿವ್ವಳ ಲಾಭ ₹ 2,949 ಕೋಟಿ ಇತ್ತು ಎಂದು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ.

ಕಂಪನಿಯ ಒಟ್ಟಾರೆ ವರಮಾನವು ₹ 26,794 ಕೋಟಿಗಳಿಂದ ₹ 30,390 ಕೋಟಿಗಳಿಗೆ ಏರಿಕೆ ಆಗಿದೆ. ಕಲ್ಲಿದ್ದಲು ತಯಾರಿಕೆಯು 24.1 ಲಕ್ಷ ಟನ್‌ಗಳಿಂದ 24.6 ಲಕ್ಷ ಟನ್‌ಗಳಿಗೆ ಏರಿಕೆ ಆಗಿದೆ.

ದೇಶಿ ಮಾರುಕಟ್ಟೆಯಲ್ಲಿ  ಬಾಂಡ್‌ಗಳು/ಸಾಲಪತ್ರಗಳ ಖಾಸಗಿ ವಿತರಣೆಯ ಮೂಲಕ ₹ 18 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಆಡಳಿತ ಮಂಡಳಿಯ ನಿರ್ದೇಶಕರು ಒಪ್ಪಿಗೆ ನೀಡಿದ್ದಾರೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು