ನವದೆಹಲಿ: ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್ಟಿಪಿಸಿ) ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹5,597 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹5,169 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣದಲ್ಲಿ ಶೇ 8ರಷ್ಟು ಹೆಚ್ಚಳವಾಗಿದೆ.

ಒಟ್ಟು ವರಮಾನವು ₹45,697 ಕೋಟಿಯಿಂದ ₹46,304 ಕೋಟಿಗೆ ಹೆಚ್ಚಳವಾಗಿದೆ ಎಂದು ನಿಗಮವು ಷೇರುಪೇಟೆಗೆ ತಿಳಿಸಿದೆ.

ಕಂಪನಿ ಆಡಳಿತ ಮಂಡಳಿಯು ಪ್ರತಿ ಷೇರಿಗೆ ₹2.75 ಮಧ್ಯಂತರ ಲಾಭಾಂಶ ನೀಡಲು ಶಿಫಾರಸು ಮಾಡಿದೆ.