ಶನಿವಾರ, ಜುಲೈ 31, 2021
28 °C
10 ಲಕ್ಷ ಬ್ಯಾರೆಲ್‌ನಷ್ಟು ಹೆಚ್ಚಿಸಲು ಒಪ್ಪಿಗೆ

ತೈಲ ಉತ್ಪಾದನೆ ಹೆಚ್ಚಳ ನಿರ್ಧಾರ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ವಿಯೆನ್ನಾ: ಕಚ್ಚಾ ತೈಲ ಉತ್ಪಾದನೆಯನ್ನು ಒಂದು ದಿನಕ್ಕೆ 10 ಲಕ್ಷ ಬ್ಯಾರೆಲ್‌ನಷ್ಟು ಹೆಚ್ಚಿಸಲು ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಘಟನೆ (ಒಪೆಕ್‌) ಒಪ್ಪಿಗೆ ನೀಡಿದೆ.

‘ತೈಲ ಉತ್ಪಾದನೆ ಹೆಚ್ಚಿಸುವ ಸೌದಿ ಅರೇಬಿಯಾದ ಪ್ರಸ್ತಾವನೆಗೆ ಇರಾನ್‌ ವಿರೋಧ ವ್ಯಕ್ತಪಡಿಸಿತ್ತು. ಅಂತಿಮವಾಗಿ ಉತ್ಪಾದನೆ ಹೆಚ್ಚಿಸಲು ತೀರ್ಮಾ
ನಕ್ಕೆ ಬರಲಾಯಿತು’ ಎಂದು ಸಭೆಯ ಬಳಿಕ ಸೌದಿ ಅರೇಬಿಯಾದ ತೈಲ ಸಚಿವ ಖೇದ್‌ ಅಲ್‌ ಫಲಿಹ್‌ ಅವರು ಮಾಹಿತಿ ನೀಡಿದ್ದಾರೆ.

ಬೇಡಿಕೆ ಹೆಚ್ಚಾಗುತ್ತಿದೆ. ಉತ್ಪಾದನೆ ತಗ್ಗಿಸಿರುವುದರಿಂದ ಅತಿ ಹೆಚ್ಚು ಬಳಕೆ ಮಾಡುತ್ತಿರುವ ಭಾರತ, ಅಮೆರಿಕ ಮತ್ತು ಚೀನಾದಂತಹ ದೇಶಗಳಲ್ಲಿ ಇಂಧನ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಉತ್ಪಾದನೆ ಹೆಚ್ಚಿಸಬೇಕು ಎಂದು ಸೌದಿ ಅರೇಬಿಯಾ  ಸಭೆಯಲ್ಲಿ ವಾದ ಮಂಡಿಸಿತು.

‘ಈ ವರ್ಷದ ದ್ವಿತೀಯಾರ್ಧದಲ್ಲಿ ಕಂಡುಬರುವ ಹೆಚ್ಚುವರಿ ಬೇಡಿಕೆಯನ್ನೂ ಈಡೇರಿಸಲಾಗುವುದು’ ಎಂದು ಫಲಿಹ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು