ನವದೆಹಲಿ (ಪಿಟಿಐ): ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಹಣದುಬ್ಬರದ ಮೇಲೆ ಮತ್ತಷ್ಟು ಒತ್ತಡ ಬೀರಲಿದ್ದು, ಮುಂಬರುವ ತಿಂಗಳಿನಲ್ಲಿ ಸಾಗಣೆ ಮತ್ತು ತಯಾರಿಕಾ ವೆಚ್ಚ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಕ್ರಿಸಿಲ್ ರೇಟಿಂಗ್ಸ್ ಸಂಸ್ಥೆಯ ವರದಿ ಮಂಗಳವಾರ ತಿಳಿಸಿದೆ.

ಮೇ 15ರಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರಿಗೆ ₹7.5ರಷ್ಟು ಹೆಚ್ಚಳವಾಗಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದರೆ, ಮತ್ತಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.

ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುವ ಮೂಲಕ ನಷ್ಟವನ್ನು ಕ್ರಮೇಣವಾಗಿ ಭರ್ತಿ ಮಾಡಿಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಇದು ₹10ರವರೆಗೆ ಹೆಚ್ಚಳವಾಗಬಹುದು ಎಂದು ಹೇಳಿದೆ.

ಹೆಚ್ಚಿನ ಸಾಗಣೆ ವೆಚ್ಚವು ಆಹಾರ ಮತ್ತು ಕೋರ್ ಹಣದುಬ್ಬರವನ್ನು ಹೆಚ್ಚಿಸಲಿದ್ದು, ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ.

ಇಂಧನ ದರದ ಹೆಚ್ಚಳವು ನೇರವಾಗಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರದ ಮೇಲೆ ಪರಿಣಾಮ ಬೀರಲಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರಿಗೆ ₹7.5ರಷ್ಟು ಹೆಚ್ಚಳದಿಂದ ಹಣದುಬ್ಬರ ಅಂದಾಜು ಶೇ 0.36ರಷ್ಟು ಏರಿಕೆಯಾದರೆ, ₹10 ಹೆಚ್ಚಳವಾದರೆ, ಶೇ 0.48ರಷ್ಟಕ್ಕೆ ತಲುಪಬಹುದು ಎಂದು ಹೇಳಿದೆ.

ದೇಶದ ಒಟ್ಟು ಸರಕು ಸಾಗಣೆಯಲ್ಲಿ ರಸ್ತೆ ಮೂಲಕ ಆಗುವ ಸಾಗಣೆಯು ಶೇ 71ರಷ್ಟು ಪಾಲನ್ನು ಹೊಂದಿದೆ. ಇಂಧನಕ್ಕೆ ಆಗುವ ವೆಚ್ಚವು ಶೇ 42ರಷ್ಟಾಗುತ್ತದೆ. ಸಾಗಣೆ ವೆಚ್ಚದಲ್ಲಿನ ಹೆಚ್ಚಳವು ಹೈನು ಉತ್ಪನ್ನಗಳು, ಚಹಾ, ಕಾಫಿ, ಹಣ್ಣುಗಳು, ಧಾನ್ಯಗಳು, ಮಸಾಲೆ ಪದಾರ್ಥಗಳು, ಮೊಟ್ಟೆ, ಮಾಂಸದ ಸಾಗಣೆ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಮುಂದಿನ ದಿನಗಳಲ್ಲಿ ಇದು ಆಹಾರ ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಹೇಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-703334343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.