ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು 2014ರ ನಂತರದ ಗರಿಷ್ಠ ಮಟ್ಟ (ಬ್ಯಾರೆಲ್ಗೆ 87 ಡಾಲರ್) ತಲುಪಿದ್ದರೂ, ದೇಶಿ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 74 ದಿನಗಳಿಂದ ಸ್ಥಿರವಾಗಿ ಇದೆ.
ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವ ಕಾರಣ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಇರುವಂತೆ ನೋಡಿಕೊಳ್ಳಲಾಗಿದೆ ಎನ್ನಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಈ ಹಿಂದೆಯೂ ಮಹತ್ವದ ಚುನಾವಣೆಗಳ ಸಂದರ್ಭದಲ್ಲಿ ಸ್ಥಿರವಾಗಿ ಇರುವಂತೆ ನೋಡಿಕೊಳ್ಳಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.