ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಟ್ರಿಕ್‌ ಕಾರ್‌ ಫ್ಯಾಕ್ಟರಿ: ಜಾಗದ ಹುಡುಕಾಟದಲ್ಲಿ ಓಲಾ

Last Updated 27 ಮೇ 2022, 10:21 IST
ಅಕ್ಷರ ಗಾತ್ರ

ನವದೆಹಲಿ: ಓಲಾ ಎಲೆಕ್ಟ್ರಿಕ್‌ ಕಂಪನಿಯು ಬ್ಯಾಟರಿ ಸೆಲ್‌ ಮತ್ತು ಎಲೆಕ್ಟ್ರಿಕ್‌ ಕಾರು ತಯಾರಿಕಾ ಘಟಕ ಸ್ಥಾಪನೆಗಾಗಿ ಜಾಗ ಹುಡುಕಾಟದಲ್ಲಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳೊಂದಿಗೆ ಮಾತುಕತೆಯನ್ನೂ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸೆಲ್‌ ಗಿಗಾಫ್ಯಾಕ್ಟರಿ ಮತ್ತು ಎಲೆಕ್ಟ್ರಿಕ್‌ ಕಾರು ಫ್ಯಾಕ್ಟರಿ ಸ್ಥಾಪನೆಗಾಗಿ ಕಂಪನಿಗೆ 1 ಸಾವಿರ ಎಕರೆ ಜಾಗದ ಅಗತ್ಯ ಇದೆ. ಇದು ₹ 10 ಸಾವಿರ ಕೋಟಿ ಹೂಡಿಕೆಯನ್ನು ಆಕರ್ಷಿಸುವ ನಿರೀಕ್ಷೆ ಇದೆ ಎಂದು ಹೇಳಿವೆ.

ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಕಂಪನಿಯು ಮಾತುಕತೆ ನಡೆಸುತ್ತಿದೆ. ಮುಂದಿನ ತಿಂಗಳಲ್ಲಿ ಮಾತುಕತೆಯನ್ನು ಅಂತಿಮಗೊಳಿಸಲು ಕಂಪನಿ ಮುಂದಾಗಿದೆ ಎಂದು ತಿಳಿಸಿವೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಲು ಕಂಪನಿಯ ವಕ್ತಾರರು ನಿರಾಕರಿಸಿದ್ದಾರೆ.

ಕಂಪನಿಯು ತಮಿಳುನಾಡಿನ ಕೃಷ್ಣಗಿರಿಯಲ್ಲಿ 500 ಎಕರೆ ಪ್ರದೇಶದಲ್ಲಿ ದ್ವಿಚಕ್ರವಾಹನ ತಯಾರಿಕಾ ಘಟಕವನ್ನು ಹೊಂದಿದೆ. ಇದು ವಿಶ್ವದ ಎರಡನೇ ಅತಿದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಘಟಕವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಕಂಪನಿಯು 2020ರ ಡಿಸೆಂಬರ್‌ನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ ತಯಾರಿಕೆ ಆರಂಭಿಸಿತು.

ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಸೆಲ್‌ ಪೂರೈಸುವ ಉದ್ದೇಶದಿಂದ ಕಂಪನಿಯು ಸೆಲ್‌ ಗಿಗಾಫ್ಯಾಕ್ಟರಿ ಸ್ಥಾಪಿಸಲು ಮುಂದಾಗಿದೆ. ಎರಡರಿಂದ ಮೂರು ವರ್ಷಗಳಲ್ಲಿ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್‌ ಕಾರು ಬಿಡುಗಡೆ ಮಾಡುವ ಆಲೋಚನೆಯನ್ನು ಹೊಂದಿರುವುದಾಗಿ ಕಂಪನಿಯ ಸ್ಥಾಪಕ ಭವಿಷ್‌ ಅಗರ್‌ವಾಲ್‌ ಅವರು ಈಚೆಗಷ್ಟೇ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT