ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌ನಿಂದ ಜಾಗತಿಕ ಆರ್ಥಿಕ ಬೆಳವಣಿಗೆ ತಗ್ಗುವ ಸಾಧ್ಯತೆ: ಐಎಂಎಫ್‌

Last Updated 4 ಡಿಸೆಂಬರ್ 2021, 10:55 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಓಮೈಕ್ರಾನ್‌ ಪರಿಣಾಮದಿಂದಾಗಿ ಜಾಗತಿಕ ಆರ್ಥಿಕ ಬೆಳವಣಿಗೆಯ ಬಗ್ಗೆ ಈ ಹಿಂದೆ ಮಾಡಿದ್ದ ಅಂದಾಜನ್ನು ತಗ್ಗಿಸಬೇಕಾಗಿ ಬರಬಹುದು ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಕೊರೊನಾ ವೈರಾಣುವಿನ ಹೊಸ ಅಲೆಯು ಬಹಳ ಬೇಗನೆ ಎಲ್ಲೆಡೆ ಹರಡುವ ಅಂದಾಜು ಮಾಡಲಾಗಿದೆ. ಹೀಗಾಗಿ ಆರ್ಥಿಕ ಬೆಳವಣಿಗೆಯ ಕುರಿತಾಗಿ ಅಕ್ಟೋಬರ್‌ನಲ್ಲಿ ಮಾಡಿದ್ದ ಅಂದಾಜನ್ನು ಮತ್ತೆ ಪರಿಷ್ಕರಣೆ ಮಾಡಬೇಕಾಗಿ ಬರಬಹುದು ಎಂದು ಅವರು ತಿಳಿಸಿದ್ದಾರೆ. ಜಾಗತಿಕ ಆರ್ಥಿಕತೆಯು ಈ ವರ್ಷ ಶೇ 5.9ರಷ್ಟು ಮತ್ತು ಮುಂದಿನ ವರ್ಷ ಶೇ 4.9ರಷ್ಟು ಬೆಳವಣಿಗೆ ಕಾಣಲಿದೆ ಎಂದು ಐಎಂಎಫ್‌ ಅಕ್ಟೋಬರ್‌ನಲ್ಲಿ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT