ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಒಂದು ದೇಶ, ಒಂದು ಒಂಬುಡ್ಸ್‌ಮನ್‌’ ವ್ಯವಸ್ಥೆ ಜಾರಿಗೆ ಆರ್‌ಬಿಐ ತೀರ್ಮಾನ

Last Updated 5 ಫೆಬ್ರುವರಿ 2021, 10:10 IST
ಅಕ್ಷರ ಗಾತ್ರ

ಮುಂಬೈ: ಬ್ಯಾಂಕ್‌, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹಾಗೂ ಡಿಜಿಟಲ್ ಪಾವತಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಏಕೀಕೃತ ಒಂಬುಡ್ಸ್‌ಮನ್‌ ವ್ಯವಸ್ಥೆ ಜಾರಿಗೆ ತರಲು ಆರ್‌ಬಿಐ ತೀರ್ಮಾನಿಸಿದೆ.

ಈಗ ಬ್ಯಾಂಕ್‌ ವ್ಯವಹಾರ, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್‌ಬಿಎಫ್‌ಸಿ) ಸಂಬಂಧಿಸಿದ ವಹಿವಾಟು ಹಾಗೂ ಬ್ಯಾಂಕ್‌ ಅಲ್ಲದ ಸಂಸ್ಥೆಗಳು ಒದಗಿಸುವ ಪ್ರೀಪೇಯ್ಡ್‌ ಡಿಜಿಟಲ್ ಪಾವತಿಗಳಿಗೆ ಸಂಬಂಧಿಸಿದ ದೂರುಗಳನ್ನು ಹೇಳಿಕೊಳ್ಳಲು ಪ್ರತ್ಯೇಕ ಒಂಬುಡ್ಸ್‌ಮನ್‌ ವ್ಯವಸ್ಥೆ ಇದೆ.

ಒಂಬುಡ್ಸ್‌ಮನ್‌ ವ್ಯವಸ್ಥೆಯನ್ನು ಸರಳಗೊಳಿಸಲು, ಮೂರನ್ನೂ ಒಂದೆಡೆ ತಂದು, ‘ಒಂದು ದೇಶ, ಒಂದು ಒಂಬುಡ್ಸ್‌ಮನ್‌’ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದರು. ಇದನ್ನು ಜೂನ್‌ ತಿಂಗಳಿಂದ ಜಾರಿಗೆ ತರುವ ಉದ್ದೇಶ ಆರ್‌ಬಿಐಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT