ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಎನ್‌ಜಿಸಿ ಲಾಭ ₹ 15,206 ಕೋಟಿ

Last Updated 13 ಆಗಸ್ಟ್ 2022, 14:44 IST
ಅಕ್ಷರ ಗಾತ್ರ

ಬೆಂಗಳೂರು: ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ಒಎನ್‌ಜಿಸಿ) ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹15,206 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹4,334 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಮೂರು ಪಟ್ಟು ಹೆಚ್ಚಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲೆ ಕೇಂದ್ರ ಸರ್ಕಾರವು ಆಕಸ್ಮಿಕ ಲಾಭ ತೆರಿಗೆ ವಿಧಿಸುವುದಕ್ಕೂ ಮುನ್ನ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರ ಹೆಚ್ಚಾಗಿದ್ದರಿಂದ ಕಂಪನಿಯ ಗಳಿಕೆಯಲ್ಲಿ ಭಾರಿ ಏರಿಕೆ ಕಂಡಿದೆ. ಕಂಪನಿಯ ವರಮಾನ ₹ 23,022 ಕೋಟಿಯಿಂದ ₹ 42,321 ಕೋಟಿಗೆ ಏರಿಕೆ ಆಗಿದೆ.

ಕಚ್ಚಾ ತೈಲ ಉತ್ಪಾದನೆ ಶೇ 1.9ರಷ್ಟು ಮತ್ತು ಅನಿಲ ಉತ್ಪಾದನೆ ಶೇ 1.4ರಷ್ಟು ಏರಿಕೆ ಕಂಡಿದೆ ಎಂದು ಕಂಪನಿಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT