ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಎನ್‌ಜಿಸಿ ಲಾಭ ಶೇ 14ರಷ್ಟು ಇಳಿಕೆ

Published 11 ಫೆಬ್ರುವರಿ 2024, 12:15 IST
Last Updated 11 ಫೆಬ್ರುವರಿ 2024, 12:15 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) 2023–24ರ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದ ನಿವ್ವಳ ಲಾಭದಲ್ಲಿ ಶೇ14ರಷ್ಟು ಇಳಿಕೆ ಕಂಡಿದೆ. 

ಕಚ್ಚಾ ತೈಲ ದರ ಇಳಿಕೆ ಮತ್ತು ಉತ್ಪಾದನೆ ಕಡಿಮೆ ಆಗಿರುವುದರಿಂದ ಲಾಭದಲ್ಲಿ ಇಳಿಕೆ ಆಗಿದೆ ಎಂದು ಕಂಪನಿ ಹೇಳಿದೆ.

ಕಂಪನಿಯು 2022–23ರ ಮೂರನೇ ತ್ರೈಮಾಸಿಕದಲ್ಲಿ ₹11,045 ಕೋಟಿ ನಿವ್ವಳ ಲಾಭ ಗಳಿಸಿತ್ತು. ಈ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹9,536 ಕೋಟಿ ಲಾಭ ಗಳಿಸಿದೆ. ಒಟ್ಟಾರೆ ಲಾಭದಲ್ಲಿ ಶೇ13.7ರಷ್ಟು ಇಳಿಕೆ ಕಂಡಿದೆ ಎಂದು ಕಂಪನಿ ತಿಳಿಸಿದೆ.

ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಕಚ್ಚಾ ತೈಲ ಬೆಲೆ ಶೇ 6.4 ಮತ್ತು ಅನಿಲ ಬೆಲೆ ಶೇ 24.2ರಷ್ಟು ಇಳಿಕೆಯಾಗಿದ್ದರೆ,  ಉತ್ಪಾದನೆಯು ಕ್ರಮವಾಗಿ ಶೇ 3.3 ಮತ್ತು ಶೇ 4.3ರಷ್ಟು ಕಡಿಮೆ ಆಗಿದೆ. ಒಟ್ಟು ವರಮಾನವು ₹34,789 ಕೋಟಿ (ಶೇ 10ರಷ್ಟು) ಕುಸಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT