ಪುಣೆ / ನಾಸಿಕ್ (ಪಿಟಿಐ): ಈರುಳ್ಳಿ ಬೆಲೆ ಕುಸಿತದ ಕಾರಣದಿಂದ ಪ್ರತಿ ಕೆ.ಜಿಗೆ ₹12.35ರಂತೆ (ಕ್ವಿಂಟಲ್ಗೆ ₹1,235) ರೈತರಿಂದ ಈರುಳ್ಳಿ ಖರೀದಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪಶ್ಚಿಮ ಏಷ್ಯಾದ ಸಂಘರ್ಷದಿಂದ ಈರುಳ್ಳಿ ರಫ್ತಿಗೆ ತೊಂದರೆ ಉಂಟಾಗಿದ್ದು, ಬೆಲೆ ಕುಸಿದಿದೆ. ಹೀಗಾಗಿ, ಶುಕ್ರವಾರದಿಂದಲೇ ಖರೀದಿಸಲಾಗುವುದು ಎಂದು ಹೇಳಿದ್ದಾರೆ.

ಈರುಳ್ಳಿ ದರದ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಜೊತೆ ಚೌಹಾಣ್ ಮಾತುಕತೆ ನಡೆಸಿದ ಬಳಿಕ ಈ ಘೋಷಣೆ ಮಾಡಿದ್ದಾರೆ.

ವಿರೋಧ: ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ ಈರುಳ್ಳಿಯನ್ನು ₹1,235ರಂತೆ ಖರೀದಿಸುವ ನಿರ್ಧಾರವನ್ನು ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರರ ಸಂಘ ವಿರೋಧಿಸಿದ್ದು, ಕ್ವಿಂಟಲ್ಗೆ ಕನಿಷ್ಠ ₹3 ಸಾವಿರ ನೀಡಬೇಕು ಎಂದು ಒತ್ತಾಯಿಸಿದೆ.

2023ರಲ್ಲಿ ದೇವೇಂದ್ರ ಫಡಣವೀಸ್ ಅವರು ಉಪ ಮುಖ್ಯಮಂತ್ರಿ ಆಗಿದ್ದರು. ಅಂದು ಕ್ವಿಂಟಲ್ಗೆ ₹2,410ರಂತೆ ಈರುಳ್ಳಿ ಖರೀದಿಸಲಾಗಿತ್ತು. ಆದರೆ, ಇಂದು ₹1,235ರಂತೆ ಖರೀದಿಸ ಲಾಗುತ್ತಿದೆ. ಇದು ಉತ್ಪಾದನಾ ವೆಚ್ಚಕ್ಕೂ ಸಾಕಾಗುವುದಿಲ್ಲ ಎಂದು ಹೇಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1045786713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.