ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐ ಸಭೆಯಲ್ಲಿ ಚರ್ಚೆಯಾದ ಈರುಳ್ಳಿ ಬೆಲೆ!

Last Updated 20 ಡಿಸೆಂಬರ್ 2019, 20:20 IST
ಅಕ್ಷರ ಗಾತ್ರ

ನವದೆಹಲಿ : ಈ ತಿಂಗಳ 5ರಂದು ನಡೆದಿದ್ದ ಭಾರತೀಯ ರಿಸರ್ವ್‌ ಬ್ಯಾಂಕ್‌ನ ದ್ವೈಮಾಸಿಕ ಹಣಕಾಸು ಪರಾಮರ್ಶೆ ಸಮಿತಿ ಸಭೆಯಲ್ಲಿ ಈರುಳ್ಳಿ ಬೆಲೆ ಏರಿಕೆಯು ಪ್ರಮುಖವಾಗಿ ಪ್ರಸ್ತಾಪವಾಗಿತ್ತು.

ಅಲ್ಪಾವಧಿ ಬಡ್ಡಿ (ರೆಪೊ) ದರಗಳನ್ನು ನಿರ್ಧರಿಸುವ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಮಹತ್ವದ ಸಭೆಯಲ್ಲಿ ಈರುಳ್ಳಿಯು ಚರ್ಚೆಯ ವಿಷಯವಾಗಿ ಗಮನ ಸೆಳೆದಿತ್ತು. ಗುರುವಾರ ಬಹಿರಂಗಗೊಂಡಿರುವ ಸಭೆಯ ಕಲಾಪಗಳ ವಿವರಗಳಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ.

ದುಬಾರಿ ಈರುಳ್ಳಿ ಕಾರಣಕ್ಕೆ ಚಿಲ್ಲರೆ ಹಣದುಬ್ಬರವು ಏರಿಕೆ ಹಾದಿಯಲ್ಲಿ ಇರುವುದರಿಂದ ರೆಪೊ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ‘ಎಂಪಿಸಿ’ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT