ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವರ್ಷ 10 ಸಾವಿರ ಹೊಸ ಅಂಚೆ ಕಚೇರಿ: ಇಲಾಖೆ ಕಾರ್ಯದರ್ಶಿ ಮಾಹಿತಿ

Last Updated 25 ಆಗಸ್ಟ್ 2022, 14:19 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರದ ಸೇವೆಗಳನ್ನು ತಂತ್ರಜ್ಞಾನದ ನೆರವಿನಿಂದ ಗ್ರಾಹಕರು ಇರುವಲ್ಲಿಯೇ ನೀಡುವ ಕೆಲಸ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 10 ಸಾವಿರ ಅಂಚೆ ಕಚೇರಿಗಳನ್ನು ತೆರೆಯಲಾಗುವುದು ಎಂದು ಅಂಚೆ ಇಲಾಖೆಯ ಕಾರ್ಯದರ್ಶಿ ಅಮನ್‌ ಶರ್ಮಾ ಹೇಳಿದ್ದಾರೆ.

ಸಿಐಐ ಸಮಾವೇಶದಲ್ಲಿ ಮಾತನಾಡಿದ ಅವರು, ‘ಜನ ವಾಸ ಇರುವ ಪ್ರದೇಶದ 5 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಬ್ಯಾಂಕಿಂಗ್‌ ಮತ್ತು ಹಣಕಾಸು ಸೇವೆಗಳು ಲಭ್ಯವಾಗಬೇಕು ಎಂದು ಸರ್ಕಾರ ಬಯಸಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಂಚೆ ಕಚೇರಿಗಳನ್ನು ತೆರೆಯಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಇದರಿಂದಾಗಿ ಒಟ್ಟು ಕಚೇರಿಗಳ ಸಂಖ್ಯೆ 1.7 ಲಕ್ಷಕ್ಕೆ ತಲುಪಲಿದೆ. ‘ತಂತ್ರಜ್ಞಾನ ಬಳಕೆಯ ಮೂಲಕ ಅಂಚೆ ಕಚೇರಿಗಳನ್ನು ಆಧುನೀಕರಣಗೊಳಿಸಲು ಸರ್ಕಾರವು ₹ 5,200 ಕೋಟಿಯನ್ನು ಇಲಾಖೆಗೆ ನೀಡಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT