ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿ ಡಿವೈಸ್‌ನಲ್ಲೂ ಭಾರತ ನಿರ್ಮಿತ ಚಿಪ್; ಇದುವೇ ನಮ್ಮ ಕನಸು: ಪ್ರಧಾನಿ ಮೋದಿ

Published : 11 ಸೆಪ್ಟೆಂಬರ್ 2024, 7:23 IST
Last Updated : 11 ಸೆಪ್ಟೆಂಬರ್ 2024, 7:23 IST
ಫಾಲೋ ಮಾಡಿ
Comments

ನವದೆಹಲಿ: 'ಜಗತ್ತಿನ ಪ್ರತಿಯೊಂದು ಡಿವೈಸ್‌ನಲ್ಲೂ ಭಾರತ ನಿರ್ಮಿತ ಚಿಪ್ ಹೊಂದಿರಬೇಕು ಎನ್ನುವುದೇ ನಮ್ಮ ಕನಸಾಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿ 'ಸೆಮಿಕಾನ್ ಇಂಡಿಯಾ 2024 ಸಮಾವೇಶ'ವನ್ನು (SEMICON India 2024) ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಸೆಮಿಕಂಡಕ್ಟರ್ ತಯಾರಿಕೆಯಲ್ಲಿ ₹1.5 ಲಕ್ಷ ಕೋಟಿಗೂ ಅಧಿಕ ಹೂಡಿಕೆ ಮಾಡಲಾಗಿದ್ದು, ಹಲವು ಯೋಜನೆಗಳು ಪ್ರಗತಿಯಲ್ಲಿವೆ' ಎಂದು ಉಲ್ಲೇಖಿಸಿದ್ದಾರೆ.

'ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಸಮಗ್ರ, ಸ್ಥಿರ ನೀತಿ, ಮತ್ತು ಸುಲಭವಾಗಿ ವ್ಯವಹರಿಸುವ ವ್ಯವಸ್ಥೆಯನ್ನು ಒದಗಿಸುತ್ತದೆ' ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಹೂಡಿಕೆ ಮಾಡಲು ಇದುವೇ ಸರಿಯಾದ ಸಮಯ ಎಂದು ಅವರು ಕರೆ ನೀಡಿದ್ದಾರೆ.

'ಜಾಗತಿಕ ಸೆಮಿಕಂಡಕ್ಟರ್ ಉದ್ಯಮಕ್ಕೆ ಸಂಬಂಧಿಸಿದಂತೆ ಇಂತಹ ಬೃಹತ್ ಸಮಾವೇಶ ಆಯೋಜಿಸುತ್ತಿರುವ ವಿಶ್ವದ 8ನೇ ದೇಶ ಭಾರತವಾಗಿದೆ. ಭಾರತದಲ್ಲಿರಲು ಇದುವೇ ಸರಿಯಾದ ಸಮಯವಾಗಿದೆ. ನೀವು ಸರಿಯಾದ ಸಮಯದಲ್ಲಿ ಸರಿಯಾದ ಜಾಗದಲ್ಲಿದ್ದೀರಿ. 21ನೇ ಶತಮಾನದಲ್ಲಿ ಭಾರತವು ಇಡೀ ವಿಶ್ವಕ್ಕೆ ಭರವಸೆಯಾಗಿದೆ' ಎಂದು ಅವರು ಹೇಳಿದ್ದಾರೆ.

'ತಂತ್ರಜ್ಞಾನ ಆಧಾರಿತ ಮಾರುಕಟ್ಟೆ ಹಾಗೂ ಬೆಳೆಯುತ್ತಿರುವ ಉತ್ಪಾದನಾ ನೆಲೆಯಾಗಿ ಭಾರತ ಸರ್ಕಾರವು ವಿಶಿಷ್ಟ ಮಾರುಕಟ್ಟೆಯನ್ನು ಒದಗಿಸುತ್ತದೆ' ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT