ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Published 12 ಡಿಸೆಂಬರ್ 2023, 15:33 IST
Last Updated 12 ಡಿಸೆಂಬರ್ 2023, 15:33 IST
ಅಕ್ಷರ ಗಾತ್ರ

ನವದೆಹಲಿ: ‘2004ರ ಜನವರಿ 1ರ ನಂತರ ಕೇಂದ್ರ ಸರ್ಕಾರಿ ನೌಕರರಾಗಿ ನೇಮಕವಾದವರಿಗೆ ಮತ್ತೆ ಹಳೆಯ ಪಿಂಚಣಿ ವ್ಯವಸ್ಥೆ (ಒ‍‍‍‍ಪಿಎಸ್) ಜಾರಿಗೊಳಿಸುವ ಯಾವುದೇ ಪ್ರಸ್ತಾವವು ತನ್ನ ಪರಿಶೀಲನೆಯಲ್ಲಿ ಇಲ್ಲ’ ಎಂದು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.

ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ. 

ಕೇಂದ್ರ ಪಿಂಚಣಿ ಮತ್ತು ಪಿಂಚಣಿದಾರರ ಕ್ಷೇಮಾಭಿವೃದ್ಧಿ ಇಲಾಖೆಯ ಮಾಹಿತಿ ಅನ್ವಯ ಈ ವರ್ಷದ ಮಾರ್ಚ್‌ ಅಂತ್ಯಕ್ಕೆ ಒಟ್ಟು 67.95 ಲಕ್ಷ ಕೇಂದ್ರ ಸರ್ಕಾರಿ ಪಿಂಚಣಿದಾರರು ಇದ್ದಾರೆ ಎಂದು ವಿವರಿಸಿದ್ದಾರೆ.

ಈ ಪೈಕಿ ನಾಗರಿಕ ಸೇವೆ 11.42 ಲಕ್ಷ, ರಕ್ಷಣೆ 33.87 ಲಕ್ಷ, ದೂರಸಂಪರ್ಕ 4.38 ಲಕ್ಷ, ಅಂಚೆ 3.01 ಲಕ್ಷ ಹಾಗೂ ರೈಲ್ವೆ ಇಲಾಖೆಯಲ್ಲಿ 15.25 ಲಕ್ಷ ಪಿಂಚಣಿದಾರರು ಇದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT