ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

GST ಪರಿಹಾರ: ₹ 53,600 ಕೋಟಿಗೂ ಅಧಿಕ ಮೊತ್ತ ಬಿಡುಗಡೆಗೆ ಬಾಕಿ –ನಿರ್ಮಲಾ

Last Updated 15 ಮಾರ್ಚ್ 2022, 21:45 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿ ರಾಜ್ಯಗಳಿಗೆ ₹ 53,600 ಕೋಟಿಗೂ ಅಧಿಕ ಜಿಎಸ್‌ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಬೇಕಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಮಂಗಳವಾರ ತಿಳಿಸಿದರು.

‘ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ವರೆಗೆ ₹ 96,576 ಕೋಟಿ ಬಿಡುಗಡೆ ಮಾಡಲಾಗಿದೆ. ಜಿಎಸ್‌ಟಿ ಅನುಷ್ಠಾನ ಸಂದರ್ಭದಲ್ಲಿ ಆಗುವ ವರಮಾನ ಕೊರತೆಗೆ ಸಂಬಂಧಿಸಿ ಹೆಚ್ಚುವರಿಯಾಗಿ ₹ 1.59 ಲಕ್ಷ ಕೋಟಿ ಸಾಲವಾಗಿ ನೀಡಲಾಗಿದೆ’ ಎಂದು ಅವರು ಸದನಕ್ಕೆ ತಿಳಿಸಿದರು.

‘ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್‌ಟಿ ಪರಿಹಾರವನ್ನು ಬಿಡುಗಡೆ ಮಾಡಲು ಕೇಂದ್ರ ಬದ್ಧವಾಗಿದೆ. ಜಿಎಸ್‌ಟಿ ವರಮಾನ ಕೊರತೆಯನ್ನು ಸರಿದೂಗಿಸುವ ಸಲುವಾಗಿ ಪರಿಹಾರ ಸೆಸ್‌ ವಿಧಿಸುವುದನ್ನು ವಿಸ್ತರಿಸಲಾಗುವುದು’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT