₹15,356 ಕೋಟಿ ವಿದೇಶಿಬಂಡವಾಳ ಹೊರಹರಿವು

7

₹15,356 ಕೋಟಿ ವಿದೇಶಿಬಂಡವಾಳ ಹೊರಹರಿವು

Published:
Updated:

ನವದೆಹಲಿ: ವಿದೇಶಿ ಹೂಡಿಕೆದಾರರು ಬಂಡವಾಳ ಮಾರುಕಟ್ಟೆಯಿಂದ ಸೆಪ್ಟೆಂಬರ್‌ನಲ್ಲಿ ಇದುವರೆಗೆ ₹ 15,365 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ಚಾಲ್ತಿ ಖಾತೆ ಕೊರತೆ ಅಂತರ ಹೆಚ್ಚಾಗುತ್ತಿದೆ. ಇದರ ಜತೆಗೆ ಜಾಗತಿಕ ವಾಣಿಜ್ಯ ಸಮರದಿಂದಾಗಿ ಷೇರುಗಳು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡುತ್ತಿದ್ದಾರೆ.

ಏಪ್ರಿಲ್‌–ಜೂನ್‌ ಅವಧಿಯಲ್ಲಿ ₹ 61 ಸಾವಿರ ಕೋಟಿ ಹಿಂದಕ್ಕೆ ಪಡೆದಿದ್ದರು. ಅದಾದ ಬಳಿಕ ಜುಲೈನಲ್ಲಿ ₹ 2,300 ಕೋಟಿ ಹಾಗೂ ಆಗಸ್ಟ್‌ನಲ್ಲಿ ₹ 5,200 ಕೋಟಿ ಹೂಡಿಕೆ ಮಾಡಿದ್ದರು. 

‘ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ ಕುಸಿತ ಹಾಗೂ ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹವಾಗಿದೆ. ಈ ಕಾರಣಗಳಿಂದಾಗಿ ವಿದೇಶಿ ಬಂಡವಾಳ ಹೊರಹರಿವು ಹೆಚ್ಚಾಗಿದೆ’ ಎಂದು ಮಾರ್ನಿಂಗ್‌ಸ್ಟಾರ್ ಸಂಸ್ಥೆಯ ಸಂಶೋಧನಾ ವಿಶ್ಲೇಷಕ ಹಿಮಾಮ್ಶು ಶ್ರೀವಾಸ್ತವ್‌ ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ, ಅಭಿವೃದ್ಧಿ ಹೊಂದಿರುವ ದೇಶಗಳಿಗಿಂತಲೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೂಡಿಕೆ ಮಾಡುವುದು ಹೆಚ್ಚಿನ ಅಪಾಯಕಾರಿ ಎಂದು ಪರಿಗಣಿಸಿದ್ದಾರೆ ಎಂದೂ ಹೇಳಿದ್ದಾರೆ.

* ₹9,200 ಕೋಟಿ – ಮಾರಾಟ ಮಾಡಿರುವ ಷೇರುಗಳ ಮೌಲ್ಯ

* ₹46,510 ಕೋಟಿ – ಮಾರಾಟ ಮಾಡಿರುವ ಸಾಲಪತ್ರಗಳ ಮೌಲ್ಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !