ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ: ಶೋಭಾ ಕರಂದ್ಲಾಜೆ

Last Updated 5 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ಕಲಬುರಗಿ: ಪ್ರಸ್ತುತ ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ‌ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ‌ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ರೈತ ಉತ್ಪಾದಕ ಸಂಘ (ಎಫ್‌ಪಿಒ)ಗಳನ್ನು ನೋಂದಣಿ ಮಾಡಿಕೊಂಡವರಿಗೆ ಸಂಸ್ಕರಣಾ ಘಟಕ, ಕಚೇರಿ ಸ್ಥಾಪಿಸಲು ₹18ರಿಂದ ₹ 20 ಲಕ್ಷ ಸಾಲ ಸೌಲಭ್ಯ ನೀಡಲಾಗುವುದು. ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಅಲ್ಲಿಂದ ಬರಬೇಕಿದ್ದ ಎಣ್ಣೆ ಪದಾರ್ಥಗಳು ಬರುತ್ತಿಲ್ಲ.‌ ಖಾದ್ಯ ತೈಲ ಉತ್ಪಾದನೆಯಲ್ಲಿ ಆತ್ಮ ನಿರ್ಭರ (ಸ್ವಾವಲಂಬನೆ)ವಾಗಲು ಎಣ್ಣೆ ಬೀಜಗಳ‌ ಕಿಟ್ ನೀಡಲಾಗುತ್ತಿದೆ' ಎಂದರು.

ಬೆಳೆ ಪ್ರಮಾಣ ಕುಸಿತ: ರಾಜ್ಯದಲ್ಲಿ ಮೊದಲು 13 ಲಕ್ಷ ‌ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ, ಕುಸುಬೆ, ಸಾಸಿವೆಯಂತಹ ಎಣ್ಣೆ ಕಾಳುಗಳನ್ನು ಬೆಳೆಯುತ್ತಿದ್ದರು. ಈಗ ಆ ಪ್ರಮಾಣ ಮೂರು ಲಕ್ಷ ಎಕರೆಗೆ ಕುಸಿದೆ. ರೈತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವ ಮೂಲಕ ಉತ್ಪಾದನಾ ಕ್ಷೇತ್ರವನ್ನು ಹೆಚ್ಚಿಸಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT