ಶುಕ್ರವಾರ, ಸೆಪ್ಟೆಂಬರ್ 17, 2021
29 °C

5 ಲಕ್ಷ ಕೋಟಿ ಡಾಲರ್ ಅರ್ಥ ವ್ಯವಸ್ಥೆ ಅನುಮಾನ: ಪ್ರೊ. ವಂಶಿ ವಕುಲಾಭರಣಂ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2024–25ರೊಳಗೆ ಭಾರತವು 5 ಲಕ್ಷ ಕೋಟಿ ಡಾಲರ್ ಮೌಲ್ಯದ ಅರ್ಥ ವ್ಯವಸ್ಥೆಯಾಗಿ ಬೆಳೆಯುವ ಸಾಧ್ಯತೆ ತೀರಾ ಕಡಿಮೆ ಎಂದು ಮೆಸ್ಯಾಚುಸೆಟ್ಸ್‌ ವಿಶ್ವವಿದ್ಯಾಲಯದ ಅರ್ಥಶಾಸ್ತ್ರಜ್ಞ ಪ್ರೊ. ವಂಶಿ ವಕುಲಾಭರಣಂ ಹೇಳಿದ್ದಾರೆ. ಕೋವಿಡ್‌–19ರಿಂದಾಗಿ ಉಂಟಾದ ಹಿಂಜರಿತ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

‘ಈಗ ದೇಶದ ಅರ್ಥ ವ್ಯವಸ್ಥೆಯ ಗಾತ್ರವು 3 ಲಕ್ಷ ಕೋಟಿ ಡಾಲರ್‌ಗಿಂತ ಕಡಿಮೆ ಇದೆ. ಇದು ನಾಲ್ಕು ವರ್ಷಗಳಲ್ಲಿ 5 ಲಕ್ಷ ಕೋಟಿ ಡಾಲರ್‌ ಮೌಲ್ಯದ್ದಾಗಿ ಬೆಳೆಯಬೇಕು ಎಂದಾದರೆ ಪ್ರತಿ ವರ್ಷ ಶೇಕಡ 13ಕ್ಕಿಂತ ಹೆಚ್ಚಿನ ಪ್ರಮಾಣದ ಏರಿಕೆ ದಾಖಲಿಸಬೇಕು’ ಎಂದು ಅವರು ಹೇಳಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೂ ಈ ಪ್ರಮಾಣದ ಬೆಳವಣಿಗೆ ಸಾಧಿಸಲು ಆಗಲಿಕ್ಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಣದುಬ್ಬರ ಪ್ರಮಾಣದ ಹೆಚ್ಚಳದಿಂದ ಬಡವರನ್ನು ರಕ್ಷಿಸಬೇಕು. ಅಲ್ಪಾವಧಿಯಲ್ಲಿ ಬಡವರಿಗೆ ತೊಂದರೆ ಆಗದಂತೆ ಸರ್ಕಾರವು ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು