ನವದೆಹಲಿ (ಪಿಟಿಐ): ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಚಂದಾದಾರರ ಪಿಂಚಣಿ ಮೊತ್ತವನ್ನು ಈಗಿನ ₹1,000ಕ್ಕಿಂತ ಹೆಚ್ಚು ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು ಏಕೆ ಎಂದು ಸಂಸತ್ತಿನ ಸ್ಥಾಯಿ ಸಮಿತಿಯೊಂದು ಕೇಂದ್ರ ಹಣಕಾಸು ಸಚಿವಾಲಯದಿಂದ ವಿವರಣೆ ಕೇಳಲಿದೆ.

ಪಿಂಚಣಿ ಮೊತ್ತ ಹೆಚ್ಚಿಸುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಪ್ರಸ್ತಾವ ಸಲ್ಲಿಸಿತ್ತು. ಆದರೆ ಪಿಂಚಣಿ ಹೆಚ್ಚಳದ ಪ್ರಸ್ತಾವ ಎಷ್ಟಿತ್ತು ಎಂಬುದು ಸ್ಪಷ್ಟವಾಗಿಲ್ಲ.

ಕಾರ್ಮಿಕ ಸಚಿವಾಲಯವು 1995ರ ನೌಕರರ ಪಿಂಚಣಿ ಯೋಜನೆಯನ್ನು (ಇಪಿಎಸ್) ಸಂಪೂರ್ಣವಾಗಿ ಪುನರ್ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.

ಸದಸ್ಯರಿಗೆ ನೀಡುವ ಮಾಸಿಕ ಕನಿಷ್ಠ ಪಿಂಚಣಿಯ ಮೊತ್ತವು ₹ 2,000 ಇರಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.