ಸೋಮವಾರ, ಆಗಸ್ಟ್ 2, 2021
20 °C

ಜೂನ್‌ನಲ್ಲಿ ಪ್ರಯಾಣಿಕ ವಾಹನಗಳ ಸಗಟು ಮಾರಾಟ ಹೆಚ್ಚಳ

‍ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಯಾಣಿಕ ವಾಹನಗಳ ಸಗಟು ಮಾರಾಟವು ಹಿಂದಿನ ವರ್ಷದ ಜೂನ್‌ಗೆ ಹೋಲಿಸಿದರೆ ಈ ವರ್ಷದ ಜೂನ್‌ನಲ್ಲಿ ಎರಡುಪಟ್ಟು ಹೆಚ್ಚಾಗಿದೆ. 2020ರ ಜೂನ್‌ನಲ್ಲಿ 1.05 ಲಕ್ಷ ವಾಹನಗಳು ಮಾರಾಟ ಆಗಿದ್ದವು. ಈ ವರ್ಷದ ಜೂನ್‌ನಲ್ಲಿ ಮಾರಾಟವು 2.31 ಲಕ್ಷಕ್ಕೆ ಏರಿಕೆ ಕಂಡಿದೆ.

ಭಾರತೀಯ ಆಟೊಮೊಬೈಲ್‌ ತಯಾರಕರ ಸಂಘದ (ಎಸ್‌ಐಎಎಂ) ಪ್ರಕಾರ, ಈ ವರ್ಷದ ಜೂನ್‌ನಲ್ಲಿ 10.55 ಲಕ್ಷ ದ್ವಿಚಕ್ರ ವಾಹನಗಳು ಮಾರಾಟ ಆಗಿವೆ. ಕಳೆದ ವರ್ಷದ ಜೂನ್‌ನಲ್ಲಿ 10.14 ಲಕ್ಷದಷ್ಟು ಮಾರಾಟ ಆಗಿತ್ತು. ತ್ರಿಚಕ್ರ ವಾಹನಗಳ ಮಾರಾಟ 10,300ರಿಂದ 9,397ಕ್ಕೆ ಇಳಿಕೆ ಕಂಡಿದೆ. ಎಲ್ಲಾ ವಿಭಾಗಗಳನ್ನೂ ಒಳಗೊಂಡ ಮಾರಾಟವು 11.30 ಲಕ್ಷದಿಂದ 12.96 ಲಕ್ಷಕ್ಕೆ ಏರಿಕೆ ಆಗಿದೆ ಎಂದು ಎಸ್‌ಐಎಎಂ ತಿಳಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಪ್ರಯಾಣಿಕ ವಾಹನಗಳ ಮಾರಾಟ 6.46 ಲಕ್ಷದಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 1.53 ಲಕ್ಷದಷ್ಟು ಇತ್ತು. ಎಲ್ಲಾ ವಿಭಾಗಗಳನ್ನೂ ಒಳಗೊಂಡು ಒಟ್ಟಾರೆ ಮಾರಾಟ 14.92 ಲಕ್ಷದಿಂದ 31.80 ಲಕ್ಷಕ್ಕೆ ಏರಿಕೆ ಆಗಿದೆ.

ದೇಶದ ವಾಹನೋದ್ಯಮವು ತಯಾರಿಕಾ ವೆಚ್ಚ ಹೆಚ್ಚಳ, ಸೆಮಿಕಂಡಕ್ಟರ್‌ ಕೊರತೆ ಮತ್ತು ಕೋವಿಡ್‌ನ ಮೂರನೇ ಅಲೆಯ ಕುರಿತಾದ ಆತಂಕದಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂತಹ ಅನಿಶ್ಚಿತ ಪರಿಸ್ಥಿತಿಯಲ್ಲಿ ಗ್ರಾಹಕರ ಸುರಕ್ಷತೆಯನ್ನು ಖಾತರಿಪಡಿಸುವುದರ ಜೊತೆಗೆ ತಯಾರಿಕೆ ಮತ್ತು ಮಾರಾಟವನ್ನು ಹೆಚ್ಚಿಸಲು ಉದ್ಯಮವು ಶ್ರಮಿಸುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆನೆಚಿ ಅಯುಕವಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು