ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಿಕ ವಾಹನ ಸಗಟು ಮಾರಾಟ ಶೇ 66ರಷ್ಟು ಇಳಿಕೆ

Last Updated 11 ಜೂನ್ 2021, 11:14 IST
ಅಕ್ಷರ ಗಾತ್ರ

ನವದೆಹಲಿ: ಪ್ರಯಾಣಿಕ ವಾಹನಗಳ ಸಗಟು ಮಾರಾಟವು ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಶೇಕಡ 66ರಷ್ಟು ಇಳಿಕೆ ಕಂಡಿದೆ ಎಂದು ಭಾರತೀಯ ಆಟೊಮೊಬೈಲ್‌ ತಯಾರಕರ ಸಂಘ (ಎಸ್‌ಐಎಎಂ) ಹೇಳಿದೆ. ಮೇ ತಿಂಗಳಿನಲ್ಲಿ ಲಾಕ್‌ಡೌನ್‌ ಜಾರಿಯಲ್ಲಿ ಇದ್ದ ಕಾರಣದಿಂದಾಗಿ ಡೀಲರ್‌ಗಳಿಗೆ ವಾಹನಗಳನ್ನು ಕಳುಹಿಸುವುದಕ್ಕೆ ಅಡ್ಡಿ ಆಯಿತು ಎಂದು ಅದು ಹೇಳಿದೆ.

ಏಪ್ರಿಲ್‌ನಲ್ಲಿ ಪ್ರಯಾಣಿಕ ವಾಹನಗಳ ಸಗಟು ಮಾರಾಟವು 2.61 ಲಕ್ಷ ಆಗಿತ್ತು. ಆದರೆ ಮೇ ತಿಂಗಳಿನಲ್ಲಿ 88 ಸಾವಿರ ವಾಹನಗಳನ್ನು ಮಾತ್ರ ಮಾರಾಟ ಮಾಡಲು ಸಾಧ್ಯವಾಗಿದೆ.

ದ್ವಿಚಕ್ರ ವಾಹನಗಳ ಸಗಟು ಮಾರಾಟವು ಶೇ 65ರಷ್ಟು ಹಾಗೂ ತ್ರಿಚಕ್ರ ವಾಹನಗಳ ಮಾರಾಟ ಶೇ 91ರಷ್ಟು ಇಳಿಕೆ ಕಂಡಿದೆ. ‘ಮೇ ತಿಂಗಳಿನಲ್ಲಿ ಹಲವು ರಾಜ್ಯಗಳು ಲಾಕ್‌ಡೌನ್‌ ಜಾರಿಗೆ ತಂದಿದ್ದವು. ಇದರಿಂದಾಗಿ ಮಾರಾಟ ಹಾಗೂ ವಾಹನ ತಯಾರಿಕೆ ಮೇಲೆ ಪರಿಣಾಮ ಉಂಟಾಗಿದೆ. ಆಮ್ಲಜನಕವನ್ನು ವೈದ್ಯಕೀಯ ಉದ್ದೇಶಗಳಿಗೆ ಬಳಕೆ ಮಾಡುವ ಇರಾದೆಯೊಂದಿಗೆ ಹಲವು ಕಂಪನಿಗಳು ತಮ್ಮ ವಾಹನ ತಯಾರಿಕಾ ಘಟಕಗಳನ್ನು ಸ್ಥಗಿತಗೊಳಿಸಿದ್ದವು’ ಎಂದು ಎಸ್‌ಐಎಎಂ ಮಹಾನಿರ್ದೇಶಕ ರಾಜೇಶ್ ಮೆನನ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT