ನವದೆಹಲಿ: ಎರಡು ಕಂಪನಿಗಳ ಸ್ವಾಧೀನ ಪ್ರಕ್ರಿಯೆ ವೇಳೆ ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ (ಫೆಮಾ) ನಿಯಮಾವಳಿ ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಪೇಟಿಎಂನ ಮಾತೃಸಂಸ್ಥೆ ಒನ್97 ಕಮ್ಯುನಿಕೇಷನ್ಗೆ (ಒಸಿಎಲ್) ಜಾರಿ ನಿರ್ದೇಶನಾಲಯವು (ಇ.ಡಿ) ಷೋಕಾಸ್ ನೋಟಿಸ್ ನೀಡಿದೆ.

ಗ್ರೂಪಾನ್ ಇಂಡಿಯಾದ ಲಿಟಲ್ ಇಂಟರ್ನೆಟ್ ಪ್ರೈವೆಟ್ ಲಿಮಿಟೆಡ್ (ಎಲ್ಐಪಿಎಲ್) ಮತ್ತು ನಿಯರ್ಬೈ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಅನ್ನು (ಎನ್ಐಪಿಎಲ್) 2017ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. 2015ರಿಂದ 2019ರ ಅವಧಿಯಲ್ಲಿ ಫೆಮಾ ನಿಯಮ ಉಲ್ಲಂಘಿಸಲಾಗಿದೆ ಎಂದು ನೋಟಿಸ್ ನೀಡಲಾಗಿದೆ ಎಂದು ಪೇಟಿಎಂ ತಿಳಿಸಿದೆ.

ಈ ನೋಟಿಸ್ಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆಯಲಾಗುತ್ತಿದೆ. ಇದು ಕಂಪನಿಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.