ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಮಾರುಕಟ್ಟೆ | ಪೇಟಿಎಂ ಷೇರು ಚೇತರಿಕೆ

Published 6 ಫೆಬ್ರುವರಿ 2024, 15:39 IST
Last Updated 6 ಫೆಬ್ರುವರಿ 2024, 15:39 IST
ಅಕ್ಷರ ಗಾತ್ರ

ನವದೆಹಲಿ: ಸತತ ಮೂರು ದಿನಗಳಿಂದ ಕುಸಿತದ ಹಾದಿ ಹಿಡಿದಿದ್ದ ಪೇಟಿಎಂನ ಮಾತೃಸಂಸ್ಥೆಯಾದ ಒನ್‌97 ಕಮ್ಯುನಿಕೇಷನ್‌ ಲಿಮಿಟೆಡ್‌ನ ಷೇರುಗಳು ಮಂಗಳವಾರ ಚೇತರಿಕೆಯ ಹಳಿಗೆ ಮರಳಿವೆ. 

ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಲಿಮಿಟೆಡ್‌ಗೆ (ಪಿಪಿಬಿಎಲ್‌) ಭಾರತೀಯ ರಿಸರ್ವ್‌ ಬ್ಯಾಂಕ್‌ ವಿಧಿಸಿರುವ ನಿರ್ಬಂಧದಿಂದಾಗಿ ಷೇರುಗಳ ಮೌಲ್ಯ ಶೇ 42ರಷ್ಟು ಕುಸಿದಿತ್ತು.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ನಲ್ಲಿ ಷೇರಿನ ಮೌಲ್ಯ ಶೇ 7.79ರಷ್ಟು ಹೆಚ್ಚಳವಾಗಿದ್ದು, ಪ್ರತಿ ಷೇರಿನ ಬೆಲೆ ₹472.50ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿಯಲ್ಲಿ ಷೇರಿನ ಮೌಲ್ಯ ಶೇ 7.99ರಷ್ಟು ಹೆಚ್ಚಳವಾಗಿದೆ. ಪ್ರತಿ ಷೇರಿನ ಬೆಲೆ ₹473.55ಕ್ಕೆ ತಲುಪಿದೆ. 

ಪಿಪಿಬಿಎಲ್‌ನಲ್ಲಿ ಒನ್‌97 ಕಮ್ಯುನಿಕೇಷನ್‌ ಶೇ 49ರಷ್ಟು ಷೇರುಗಳನ್ನು ಹೊಂದಿದ್ದರೆ, ಸಿಇಒ ವಿಜಯ್‌ ಶೇಖರ್‌ ಶರ್ಮಾ ಶೇ 51ರಷ್ಟು ಷೇರುಗಳ ಮೇಲೆ ಒಡೆತನ ಹೊಂದಿದ್ದಾರೆ.‌

ಸೂಚ್ಯಂಕಗಳು ಏರಿಕೆ:

ಸೆನ್ಸೆಕ್ಸ್‌ 454 ಅಂಶ ಏರಿಕೆಯಾಗಿ 72,186ಕ್ಕೆ ಸ್ಥಿರಗೊಂಡಿತು. ನಿಫ್ಟಿ 157 ಅಂಶ ಹೆಚ್ಚಳವಾಗಿ 21,929 ಅಂಶಕ್ಕೆ ವಹಿವಾಟನ್ನು ಮುಕ್ತಾಯಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT