ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ಗೆ ದಂಡ: ಆರ್‌ಬಿಐ

Last Updated 5 ಸೆಪ್ಟೆಂಬರ್ 2022, 22:06 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಹೌಸಿಂಗ್‌ ಫೈನಾನ್ಸ್‌ಗೆ ಸಂಬಂಧಿಸಿದ ನಿಯಮಗಳನ್ನು ಅನುಸರಿಸದೇ ಇರುವ ಕಾರಣಕ್ಕಾಗಿ ಬೆಂಗಳೂರಿನ ‘ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌’ಗೆ ₹ 25 ಲಕ್ಷದ ದಂಡ ವಿಧಿಸಲಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

ನಿಯಮ ಅನುಸರಿಸುವಲ್ಲಿ ವಿಫಲವಾಗಿರುವ ಕಾರಣಕ್ಕಾಗಿ ಒಟ್ಟು ಐದು ಸಹಕಾರಿ ಬ್ಯಾಂಕ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರಾಹಕರ ರಕ್ಷಣೆಗೆ ಸಂಬಂಧಿಸಿದಂತೆ ಆರ್‌ಬಿಐ ನೀಡಿರುವ ನಿರ್ದೇಶನಗಳನ್ನು ಅನುಸರಿಸದೇ ಇರುವ ಕಾರಣಕ್ಕಾಗಿ ಠಾಣೆ ಭಾರತ್‌ ಸಹಕಾರಿ ಬ್ಯಾಂಕ್‌ ಲಿಮಿಟೆಡ್‌ಗೆ ₹15 ಲಕ್ಷ ದಂಡ ವಿಧಿಸಲಾಗಿದೆ ಎಂದು ಇನ್ನೊಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ರೀತಿ ಝಾನ್ಸಿ ಲಕ್ಷ್ಮಿಬಾಯಿ ಅರ್ಬನ್‌ ಕೊ–ಆಪರೇಟಿವ್‌ ಬ್ಯಾಂಕ್‌ಗೆ ₹ 5 ಲಕ್ಷ, ತಮಿಳುನಾಡಿನ ನಿಕೋಲ್ಸನ್‌ ಕೊ–ಆಪರೇಟಿವ್‌ ಟೌನ್‌ ಬ್ಯಾಂಕ್‌ಗೆ ₹ 2 ಲಕ್ಷ ಹಾಗೂ ಒಡಿಶಾದ ರೂರ್ಕೆಲಾದ ಅರ್ಬನ್‌ ಕೊ–ಆಪರೇಟಿವ್‌ ಬ್ಯಾಂಕ್‌ಗೆ ₹10 ಸಾವಿರ ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT