ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎನ್‌ಪಿಎಸ್–ವಾತ್ಸಲ್ಯಗೆ ಇಂದು ಚಾಲನೆ

Published : 17 ಸೆಪ್ಟೆಂಬರ್ 2024, 22:34 IST
Last Updated : 17 ಸೆಪ್ಟೆಂಬರ್ 2024, 22:34 IST
ಫಾಲೋ ಮಾಡಿ
Comments

ನವದೆಹಲಿ: ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ನಡೆಸಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತದೆಯೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಪ್ರಶ್ನಿಸಿದರು: ಪ್ರಸಕ್ತ ಆರ್ಥಿಕ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ‘ಎನ್‌ಪಿಎಸ್‌– ವಾತ್ಸಲ್ಯ’ ಯೋಜನೆಗೆ ಸೆಪ್ಟೆಂಬರ್‌ 18ರಂದು ಕೇಂದ್ರ ಸರ್ಕಾರವು, ಅಧಿಕೃತವಾಗಿ ಚಾಲನೆ ನೀಡಲಿದೆ. 

ಪೋಷಕರು ಈ ಯೋಜನೆಯಡಿ ಮಕ್ಕಳ ಭವಿಷ್ಯಕ್ಕಾಗಿ ಹಣ ಉಳಿತಾಯಕ್ಕೆ ಅವಕಾಶ ಸಿಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಪೋಷಕರು ಎನ್‌ಪಿಎಸ್‌ನಲ್ಲಿ ಸುಲಭವಾಗಿ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಹೆಸರಿನಲ್ಲಿ ವಾರ್ಷಿಕ ಕನಿಷ್ಠ ₹1 ಸಾವಿರ ಹೂಡಿಕೆ ಮಾಡಬಹುದಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೂ ಈ ಯೋಜನೆಯನ್ನು ಕೈಗೆಟುಕುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಹೇಳಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ, ಯೋಜನೆಯಡಿ ಆನ್‌ಲೈನ್‌ ವೇದಿಕೆಯನ್ನೂ ಲೋಕಾರ್ಪಣೆಗೊಳಿಸಲಿದ್ದಾರೆ. 

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಪಿಎಫ್‌ಆರ್‌ಡಿಎ) ಈ ಯೋಜನೆಯನ್ನು ನಿರ್ವಹಣೆ ಮಾಡಲಿದೆ. 

ದೆಹಲಿ ಸೇರಿ ದೇಶದಾದ್ಯಂತ 75 ಸ್ಥಳಗಳಲ್ಲಿ ಏಕಕಾಲಕ್ಕೆ ಈ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಳಿದ ಸ್ಥಳಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಾಗುತ್ತದೆ. ಚಂದಾದಾರರಾಗುವ ಮಕ್ಕಳಿಗೆ ಹೊಸದಾಗಿ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆಯನ್ನು (ಪಿಆರ್‌ಎಎನ್‌) ವಿತರಿಸಲಾಗುತ್ತದೆ.

ಮಕ್ಕಳಿಗೆ 18 ವರ್ಷ ತುಂಬಿದ ಮೇಲೆ ಈ ಖಾತೆಯು ಸಾಮಾನ್ಯ ಎನ್‌ಪಿಎಸ್ ಖಾತೆಯಾಗಿ ಮಾರ್ಪಾಡಾಗುತ್ತದೆ. ಸಾಮಾನ್ಯ ಎನ್‌ಪಿಎಸ್‌ ಖಾತೆಯ ಮಾದರಿಯಲ್ಲಿಯೇ ವಾತ್ಸಲ್ಯ ಖಾತೆ ಇರಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT