ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಂಜಾಬ್‌: ಹೆಕ್ಟೇರ್‌ಗೆ 247 ಕೆ.ಜಿ ರಸಗೊಬ್ಬರ ಬಳಕೆ

Published : 6 ಆಗಸ್ಟ್ 2024, 14:24 IST
Last Updated : 6 ಆಗಸ್ಟ್ 2024, 14:24 IST
ಫಾಲೋ ಮಾಡಿ
Comments

ನವದೆಹಲಿ: 2023–24ನೇ ಆರ್ಥಿಕ ವರ್ಷದಲ್ಲಿ ಪ್ರತಿ ಹೆಕ್ಟೇರ್‌ಗೆ ರಸಗೊಬ್ಬರ ಬಳಕೆಯ ರಾಷ್ಟ್ರೀಯ ಸರಾಸರಿ ಪ್ರಮಾಣ 140 ಕೆ.ಜಿಯಷ್ಟಿದೆ. ಆದರೆ, ಪಂಜಾಬ್‌ನಲ್ಲಿ ರೈತರು 247.61 ಕೆ.ಜಿ ಬಳಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

‘ದೇಶದ ಇತರೆ ಭಾಗಗಳಿಗೆ ಹೋಲಿಸಿದರೆ ರಸಗೊಬ್ಬರ ಬಳಕೆಯಲ್ಲಿ ಪಂಜಾಬ್‌ ಮುಂಚೂಣಿಯಲ್ಲಿ ಇದೆಯೇ ಹಾಗೂ ಹೆಕ್ಟೇರ್‌ವಾರು ಲೆಕ್ಕಾಚಾರದಲ್ಲಿ ರಾಷ್ಟ್ರೀಯ  ಸರಾಸರಿಗಿಂತಲೂ ಶೇ 9ರಷ್ಟಕ್ಕೂ ಹೆಚ್ಚು ಬಳಕೆ ಮಾಡಲಾಗುತ್ತಿದೆಯೇ’ ಎಂಬ ಪ್ರಶ್ನೆಗೆ ಕೇಂದ್ರ ರಸಗೊಬ್ಬರ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್‌ ಅವರು, ರಾಜ್ಯಸಭೆಗೆ ತಿಳಿಸಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

ಪಂಜಾಬ್‌ನ ಕೆಲವು ಭಾಗಗಳಲ್ಲಿ ಅತಿಯಾದ ಪ್ರಮಾಣದಲ್ಲಿ ಫಾಸ್ಫೇಟ್ ರಸಗೊಬ್ಬರ ಬಳಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ಕ್ಯಾನ್ಸರ್‌ ಪ್ರಕರಣಗಳು ವರದಿಯಾಗಿರುವ ಕುರಿತು ಅಲ್ಲಿನ ಸರ್ಕಾರವು ಯಾವುದೇ ವರದಿ ಅಥವಾ ಸಂಶೋಧನಾ ವರದಿ ಸಲ್ಲಿಸಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT