ಮಂಗಳವಾರ, ಜುಲೈ 14, 2020
28 °C

ಪೆಟ್ರೋಲ್‌, ಡೀಸೆಲ್‌ ತೆರಿಗೆ ಏರಿಕೆ ನಿರ್ಧಾರ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಪ್ರಕರಣಗಳು ಏರಿಕೆಯಾಗಿ ಜನರು ಆತಂಕದಲ್ಲಿರುವ ಹಿನ್ನೆಲೆಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳ ಮಾಡಬೇಕೆ ಅಥವಾ ಮುಂದೂಡಬೇಕೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ (ಮಾ.31) ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪ್ರತಿ ಲೀಟರ್ ಮೇಲೆ ಕ್ರಮವಾಗಿ ₹1.60 ಮತ್ತು ₹1.59 ಹೆಚ್ಚಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಏಪ್ರಿಲ್‌ 1 ಕ್ಕೆ ಅನ್ವಯವಾಗುವಂತೆ ಅಂದರೆ, ಮಂಗಳವಾರ ಮಧ್ಯರಾತ್ರಿಯಿಂದಲೇ ಅದು ಜಾರಿ ಬರಬೇಕಾಗಿತ್ತು.

ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ‘ಕೊರೊನಾ ಸೋಂಕು ಹರಡಿದ್ದು, ವ್ಯಾಪಾರ ವಹಿವಾಟು ಬಂದ್ ಆಗಿದೆ. ಈ ಹೊತ್ತಿನಲ್ಲಿ ದರ ಏರಿಕೆ ಮಾಡಬೇಕೊ ಬೇಡವೋ ಎಂಬ ಬಗ್ಗೆ ಮಂಗಳವಾರ ತೀರ್ಮಾನಿಸಲಾಗುವುದು’ ಎಂದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರ‍ಪ್ಪ ಅವರು ಪೆಟ್ರೋಲ್, ಡೀಸೆಲ್ ಮೇಲೆ ಮಾರಾಟ ತೆರಿಗೆ ವಿಧಿಸುವ ಪ್ರಸ್ತಾವವನ್ನು ಬಜೆಟ್‌ನಲ್ಲಿ ಮಂಡಿಸಿದ್ದರು. 

ಪೆಟ್ರೋಲ್‌ ಮೇಲಿನ ತೆರಿಗೆ ಶೇ 32 ರಿಂದ ಶೇ 35 ಕ್ಕೂ, ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ 21 ರಿಂದ ಶೇ 24 ಕ್ಕೆ ಏರಿಕೆ ಮಾಡಲು ಉದ್ದೇಶಿಸಲಾಗಿತ್ತು. ಕೊರೊನಾ ಕಾರಣ ಬಜೆಟ್ಅಧಿವೇಶನ ಮೊಟಕುಗೊಳಿಸಿ, ವಿರೋಧಪಕ್ಷಗಳ ಅನುಪಸ್ಥಿತಿಯಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು