ಶುಕ್ರವಾರ, ಜೂನ್ 25, 2021
21 °C

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಸತತ 9 ದಿನಗಳಿಂದ ತೈಲ ದರ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

iStock Photo

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಭಾನುವಾರವೂ ದರ ಏರಿಕೆ ದಾಖಲಾಗಿದೆ. ಇದರೊಂದಿಗೆ ಸತತ ಒಂಭತ್ತನೇ ದಿನ ಗ್ರಾಹಕರ ಜೇಬಿಗೆ ಹೊರೆಯಾಗಿದೆ.

ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 24 ಪೈಸೆ ಹೆಚ್ಚಳದೊಂದಿಗೆ ಪ್ರಸ್ತುತ ದರ ಲೀ.ಗೆ ₹92.34 ಗೆ ತಲುಪಿದೆ. ಡೀಸೆಲ್ ದರ ಲೀ.ಗೆ ₹90.40 ಇದೆ.

ಕೋಲ್ಕತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹92.67 ಮತ್ತು ಡೀಸೆಲ್ ದರ ಲೀಟರ್‌ಗೆ ₹86.06 ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀ.ಗೆ ₹95.33 ಮತ್ತು ಡೀಸೆಲ್ ದರ ಲೀ.ಗೆ ₹87.92 ತಲುಪಿದೆ.

ಏಪ್ರಿಲ್ 15ರವರೆಗೆ ತೈಲ ಕಂಪನಿಗಳು ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಬೆಲೆ ಪರಿಷ್ಕರಿಸಿದ್ದವು. ನಂತರದಲ್ಲಿ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.

ಅಲ್ಲದೆ, ದೇಶದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಮುಗಿಯುತ್ತಿದ್ದಂತೆ ತೈಲ ಕಂಪನಿಗಳು ಬೆಲೆ ಪರಿಷ್ಕರಣೆ ಮಾಡಿವೆ. ಇದರಿಂದಾಗಿ ಸತತ ಒಂಭತ್ತನೇ ದಿನ ದೇಶದಲ್ಲಿ ತೈಲ ದರ ಹೆಚ್ಚಳ ಕಂಡುಬಂದಿದೆ.

ಅಲ್ಲದೆ, ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹99 ಆಗಿದ್ದು, ಶತಕದ ಸನಿಹ ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು