ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ದರ ಇಂದೂ ‌ಏರಿಕೆ: ಬೆಂಗಳೂರಿನಲ್ಲಿ ಎಷ್ಟಿದೆ ಲೀಟರ್‌ ಪೆಟ್ರೋಲ್‌ ಬೆಲೆ?

ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಂಗಳವಾರ ಮತ್ತೊಮ್ಮೆ ಹೆಚ್ಚಿಸಲಾಗಿದೆ. ಈ ಮೂಲಕ ತೈಲ ದರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದೆ.

ಪೆಟ್ರೋಲ್‌ ದರದಲ್ಲಿ 28 ಪೈಸೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹97.50 ಆಗಿದೆ. ಡೀಸೆಲ್ ದರದಲ್ಲಿ 26 ಪೈಸೆ ಏರಿದ್ದು, ಪ್ರತಿ ಲೀಟರ್‌ಗೆ ₹88.23ಗೆ ಮಾರಾಟವಾಗುತ್ತಿದೆ.

ಮೇ 4ರಿಂದ ಈಚೆಗೆ ಇಂಧನ ದರದಲ್ಲಿ 28 ಬಾರಿ ಹೆಚ್ಚಳವಾಗಿದೆ. ಈ ಅವಧಿಯಲ್ಲಿ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ₹6.81 ಏರಿದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹7.18 ರೂ ಏರಿಕೆಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ ₹103.63 ಆಗಿದ್ದರೆ, ಡೀಸೆಲ್ ₹95.72ಗೆ ಮಾರಾಟವಾಗುತ್ತಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹100.76 ಆಗಿದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 93.54 ರೂ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT