ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ನಾಲ್ಕನೆ ದಿನವೂ ಏರಿದ ಪೆಟ್ರೋಲ್, ಡೀಸೆಲ್ ದರ: ಬೆಂಗಳೂರಲ್ಲಿ ಎಷ್ಟು?

Last Updated 8 ಅಕ್ಟೋಬರ್ 2021, 5:19 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ಹಿನ್ನಲೆಯಲ್ಲಿ ಸತತ ನಾಲ್ಕನೇ ದಿನವೂ ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದ್ದು, ಗರಿಷ್ಠ ಮಟ್ಟ ತಲುಪಿವೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ₹103.54 ಆಗಿದೆ. ಡೀಸೆಲ್ ಬೆಲೆ 35 ಪೈಸೆ ಹೆಚ್ಚಳವಾಗಿ ಪ್ರತಿ ಲೀಟರ್‌ಗೆ ₹92.12 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹109.54 ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ₹99.92 ರಷ್ಟಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹107.14 ಮತ್ತು ಡೀಸೆಲ್ ಬೆಲೆ ₹97.77ಕ್ಕೆ ಏರಿದೆ.

ಸ್ಥಳೀಯ ತೆರಿಗೆಗಳು ಮತ್ತು ಸರಕು ಸಾಗಾಣಿಕೆಯ ವೆಚ್ಚದ ಆಧಾರದ ಮೇಲೆ ಪ್ರದೇಶದಿಂದ ಪ್ರದೇಶಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಈಗಾಗಲೇ ಉತ್ತರ ಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಹಲವು ಸ್ಥಳಗಳಲ್ಲಿ ಪೆಟ್ರೋಲ್ ಬೆಲೆ ₹100ರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT