ಮಂಗಳವಾರ, ಮೇ 24, 2022
27 °C

ದೆಹಲಿ: ಪೆಟ್ರೋಲ್‌, ಡೀಸೆಲ್‌ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆ

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಸತತ ಒಂಬತ್ತನ್ನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಕಂಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಳವಾಗಿದೆ.

ಸದ್ಯ ದೆಹಲಿಯಲ್ಲಿ ಪೆಟ್ರೋಲ್‌ ದರ ₹89.54 ಕ್ಕೆ ತಲುಪಿದ್ದರೆ, ಡೀಸೆಲ್‌ ದರ 79.95 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್‌ ₹95.46 ಹಾಗೂ ಡೀಸೆಲ್‌ ₹86.34 ರಷ್ಟಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹92.28 ಆಗಿದ್ದು, ಡೀಸೆಲ್ ದರ ಪ್ರತಿ ಲೀಟರ್‌ಗೆ ₹84.49 ಆಗಿದೆ. ಕಳೆದ ಒಂದು ವಾರದಿಂದ ತೈಲ ದರ ಹೆಚ್ಚಾಗುತ್ತಿರುವುದರಿಂದ ಸರಕು ಸಾಗಣೆ ವೆಚ್ಚ ಏರಿಕೆಯಾಗಲಿದೆ. ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು