ಶನಿವಾರ, ಮೇ 15, 2021
26 °C

ಸತತ ಎರಡನೇ ದಿನ ತೈಲ ಬೆಲೆ ಇಳಿಕೆ: ಪೆಟ್ರೋಲ್ 21 ಪೈಸೆ, ಡೀಸೆಲ್ 20 ಪೈಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸತತ ಎರಡನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ಬೆಲೆಯಲ್ಲಿ 21 ಪೈಸೆ, ಡೀಸೆಲ್ 20 ಪೈಸೆ ಇಳಿಕೆಯಾಗಿದೆ.

ಕೋವಿಡ್–19 ಎರಡನೇ ಅಲೆಯ ಪರಿಣಾಮ ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಇಳಿಕೆ ಕಂಡಿರುವುದರಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೂ ಎರಡು ದಿನಗಳಿಂದ ಇಳಿಯುತ್ತಿದೆ.

ಬೆಲೆ ಇಳಿಕೆ ಬಳಿಕ ದೆಹಲಿಯಲ್ಲಿ ಈಗ ಒಂದು ಲೀಟರ್ ಪೆಟ್ರೋಲ್‌ ಬೆಲೆ ₹ 90.78 ಮತ್ತು ಡೀಸೆಲ್ ₹ 81.10 ಆಗಿದೆ.

ಕಳೆದ ಮಾರ್ಚ್‌ನಲ್ಲಿ ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದ ಬಳಿಕ ಪೆಟ್ರೋಲ್‌ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ₹ 21.58 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ₹ 19.18 ಏರಿಕೆ ಕಂಡಿತ್ತು.

ಕಳೆದ ತಿಂಗಳು ರಾಜಸ್ಥಾನ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ₹ 100 ದಾಟುವ ಮೂಲಕ ಗರಿಷ್ಠ ಮಟ್ಟಕ್ಕೆ ತಲುಪಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು