ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿವೆ. ಇದರ ಪರಿಣಾಮವಾಗಿ ಆಂಧ್ರಪ್ರದೇಶದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ತೆಲಂಗಾಣದ ಕೆಲವೆಡೆ ಮತ್ತು ಲೇಹ್‌ನಲ್ಲಿ ಲೀಟರ್ ಪೆಟ್ರೋಲ್ ದರವು ₹ 100ರ ಗಡಿಯನ್ನು ದಾಟಿದೆ.

ಲೀಟರ್ ಪೆಟ್ರೋಲ್ ಬೆಲೆಯನ್ನು 27 ಪೈಸೆ ಹೆಚ್ಚಿಸಲಾಗಿದೆ. ಡೀಸೆಲ್ ಬೆಲೆಯಲ್ಲಿ 28 ಏರಿಕೆ ಆಗಿದೆ. ಒಂದು ತಿಂಗಳ ಅವಧಿಯಲ್ಲಿ 18 ಬಾರಿ ತೈಲ ಬೆಲೆ ಹೆಚ್ಚಿಸಲಾಗಿದೆ. ಶುಕ್ರವಾರದ ಏರಿಕೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ₹ 97.92ಕ್ಕೆ, ಡೀಸೆಲ್ ಬೆಲೆ ₹ 90.81ಕ್ಕೆ ತಲುಪಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹ 94.76ಕ್ಕೆ, ಡೀಸೆಲ್ ಬೆಲೆ ₹ 85.66ಕ್ಕೆ ತಲುಪಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಎಲ್ಲ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆಯು ₹ 100 ಗಡಿಯನ್ನು ಈಗಾಗಲೇ ದಾಟಿದೆ. ಬಳ್ಳಾರಿಯಲ್ಲಿ ಪೆಟ್ರೋಲ್ ದರವು ₹ 99.83ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.