ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಶುಕ್ರವಾರ ತಲಾ 25 ಪೈಸೆ ಹೆಚ್ಚಳ ಮಾಡಲಾಗಿದೆ. ಇದರ ಪರಿಣಾಮವಾಗಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ ₹ 92ರ ಗಡಿಯನ್ನು ದಾಟಿದೆ. ದೆಹಲಿಯಲ್ಲಿ ₹ 85.45 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 26 ಪೈಸೆ ಹೆಚ್ಚಳವಾಗಿದ್ದು ಲೀಟರ್ ಪೆಟ್ರೋಲ್ ಬೆಲೆ ₹ 88.33ಕ್ಕೆ ತಲುಪಿದೆ.
ರಾಜಧಾನಿ ದೆಹಲಿಯಲ್ಲಿ ಲೀಟರ್ ಡೀಸೆಲ್ ದರವು ₹ 75.63ಕ್ಕೆ ತಲುಪಿದೆ. ಮುಂಬೈನಲ್ಲಿ ₹ 82.40ಕ್ಕೆ ಹಾಗೂ ಬೆಂಗಳೂರಿನಲ್ಲಿ ₹ 80.20 ಆಗಿದೆ. ಬೆಂಗಳೂರಿನಲ್ಲಿ ಡೀಸೆಲ್ ದರವು 26 ಪೈಸೆಯಷ್ಟು ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಈಗ ದೇಶದಲ್ಲಿ ಗರಿಷ್ಠ ಮಟ್ಟದಲ್ಲಿ ಇವೆ. ಎಕ್ಸೈಸ್ ಸುಂಕ ಕಡಿತ ಮಾಡಿ, ಜನಸಾಮಾನ್ಯರ ಮೇಲಿನ ಹೊರೆಯನ್ನು ತಗ್ಗಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
ಸೌದಿ ಅರೇಬಿಯಾದಲ್ಲಿ ತೈಲ ಉತ್ಪಾದನೆ ಕಡಿಮೆ ಮಾಡಿರುವುದರಿಂದಾಗಿ ತೈಲ ಬೆಲೆಯಲ್ಲಿ ಹೆಚ್ಚಳ ಆಗಿದೆ ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹಿಂದಿನ ವಾರ ಹೇಳಿದ್ದರು. ಆದರೆ ತೆರಿಗೆ ಕಡಿತ ಮಾಡುವ ಭರವಸೆ ನೀಡಿರಲಿಲ್ಲ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.