ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ

Last Updated 20 ಜೂನ್ 2021, 11:18 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೇಶದಾದ್ಯಂತ ಭಾನುವಾರ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಿವೆ. ಇದರಿಂದ ದೆಹಲಿಯಲ್ಲಿ ಪೆಟ್ರೋಲ್ ಲೀಟರಿಗೆ ₹ 97.22ಕ್ಕೆ ತಲುಪಿದೆ. ಡೀಸೆಲ್‌ ₹ 87.97ರಷ್ಟಾಗಿದೆ.

ತೈಲ ಕಂಪನಿಗಳು ಭಾನುವಾರ ಪೆಟ್ರೋಲ್‌ ದರವನ್ನು ಲೀಟರಿಗೆ 29 ಪೈಸೆ, ಡೀಸೆಲ್‌ ದರವನ್ನು 28 ಪೈಸೆ ಹೆಚ್ಚಳ ಮಾಡಿವೆ. ಈ ದರ ಏರಿಕೆಯನ್ನೂ ಒಳಗೊಂಡು ಏಳು ವಾರಗಳಲ್ಲಿ ಒಟ್ಟಾರೆ 27 ಬಾರಿ ದರ ಹೆಚ್ಚಳ ಮಾಡಿದಂತಾಗಿದೆ. ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಜಮ್ಮು–ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪೆಟ್ರೋಲ್ ಬೆಲೆಯು ಲೀಟರ್‌ಗೆ ಈಗಾಗಲೇ ₹ 100ರ ಗಡಿ ದಾಟಿ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಪೆಟ್ರೋಲ್‌ ದರ ₹ 103.36 ಮತ್ತು ಡೀಸೆಲ್ ದರ ₹ 95.44ರಷ್ಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ₹ 100.47 ಮತ್ತು ಡೀಸೆಲ್‌ ದರ ₹ 93.26ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT