ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಘೋಷಿಸಿದ ರಾಜ್ಯಗಳು: ಎಲ್ಲಿ ಎಷ್ಟು ಇಳಿಕೆ?

ನವದೆಹಲಿ: ಕೇಂದ್ರ ಸರ್ಕಾರವು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹10, ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹5 ತಗ್ಗಿಸಿದೆ. ಕೇಂದ್ರದ ನಿರ್ಧಾರ ಪ್ರಕಟವಾದ ಬೆನ್ನಿಗೇ ರಾಜ್ಯ ಸರ್ಕಾರಗಳು ಸಹ ಗ್ರಾಹಕರ ಮೇಲೆ ತೈಲದ ತೆರಿಗೆ ಹೊಣೆಯನ್ನು ಕಡಿತಗೊಳಿಸಲು ತೀರ್ಮಾನಿಸಿವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಲೀಟರಿಗೆ ಗರಿಷ್ಠ ₹7ರ ವರೆಗೂ ಕಡಿಮೆ ಮಾಡುತ್ತಿದ್ದು, ಇದರಿಂದಾಗಿ ಡೀಸೆಲ್ ದರ ₹17ರಷ್ಟು ಮತ್ತು ಪೆಟ್ರೋಲ್ ₹12ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಯಾವ ರಾಜ್ಯದಲ್ಲಿ ಎಷ್ಟು ಇಳಿಕೆ?
ಕರ್ನಾಟಕ
ಕರ್ನಾಟಕ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ₹7ರಷ್ಟು ಇಳಿಕೆ ಮಾಡುವುದಾಗಿ ಪ್ರಕಟಿಸಿದೆ. ತೆರಿಗೆ ಕಡಿತ ಗುರುವಾರ ಸಂಜೆಯಿಂದಲೇ ಅನ್ವಯವಾಗಲಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹ 95.50 ಮತ್ತು ಪ್ರತಿ ಲೀಟರ್ ಡೀಸೆಲ್ ದರ ₹ 81.50ಗೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಂದರೆ, ರಾಜ್ಯದಲ್ಲಿ ಪೆಟ್ರೋಲ್ 12 ರೂಪಾಯಿ ಮತ್ತು ಡೀಸೆಲ್ 17 ರೂಪಾಯಿ ಇಳಿಕೆಯಾಗಲಿದೆ.
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3— Basavaraj S Bommai (@BSBommai) November 3, 2021
ಉತ್ತರಾಖಂಡ
ಪೆಟ್ರೋಲ್ ಮೇಲಿನ ತೆರಿಗೆಯನ್ನು 2 ರೂಪಾಯಿ ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಇದರಿಂದಾಗಿ ಪೆಟ್ರೋಲ್ ದರ ಲೀಟರ್‌ಗೆ ಒಟ್ಟು 7 ರೂಪಾಯಿ ಕಡಿಮೆಯಾಗಲಿದೆ.
उत्तराखण्ड में पेट्रोल ₹7 होगा सस्ता।
केंद्र सरकार द्वारा पेट्रोल और डीजल पर क्रमशः ₹5 और ₹10 एक्साइज ड्यूटी घटाने के फैसले पर माननीय प्रधानमंत्री श्री @narendramodi ji का समस्त प्रदेश वासियों की ओर से हार्दिक आभार।#1NoUttarakhand pic.twitter.com/Dc25hFj7Be
— Pushkar Singh Dhami (@pushkardhami) November 3, 2021
ಅಸ್ಸಾಂ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ ತಲಾ ₹7 ಇಳಿಕೆ ಮಾಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಪೆಟ್ರೋಲ್ ದರದಲ್ಲಿ ಒಟ್ಟು 12 ರೂಪಾಯಿ ಮತ್ತು ಡೀಸೆಲ್ 17 ರೂಪಾಯಿ ಕಡಿಮೆಯಾಗಲಿದೆ.
ಗೋವಾ
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಪೆಟ್ರೋಲ್, ಡೀಸೆಲ್ ಎರಡರ ಮೇಲಿನ ತೆರಿಗೆಯನ್ನು 7 ರೂಪಾಯಿ ಕಡಿಮೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಹಣದುಬ್ಬರ ತಪ್ಪಿಸಲು ಮತ್ತು ಸಾಮಾನ್ಯ ಜನರ ಮೇಲಿನ ಹೊರೆಯನ್ನು ಇಳಿಸಲು ಕೇಂದ್ರ ಪ್ರಕಟಿಸಿರುವ ನಿರ್ಧಾರದ ಕುರಿತು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
In addition, Government of Goa shall reduce an additional Rs 7 on Petrol and Rs 7 on Diesel, thereby reducing the price of diesel by Rs 17 per litre and petrol by Rs 12 per litre. 2/2
— Dr. Pramod Sawant (@DrPramodPSawant) November 3, 2021
ತ್ರಿಪುರಾ
ಪೆಟ್ರೋಲ್ ₹12 ಮತ್ತು ಡೀಸೆಲ್ ₹17ರಷ್ಟು ಕಡಿಮೆಯಾಗಲಿದೆ ಎಂದು ತ್ರಿಪುರಾ ಸರ್ಕಾರ ಪ್ರಕಟಿಸಿದೆ. ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹7 ಇಳಿಕೆ ಮಾಡಿದ್ದು, ಇವತ್ತಿನಿಂದಲೇ ಹೊಸ ದರ ಅನ್ವಯವಾಗಿದೆ.
ಉತ್ತರ ಪ್ರದೇಶ
ಉತ್ತರ ಪ್ರದೇಶ ಸರ್ಕಾರವು ಪೆಟ್ರೋಲ್ ಮೇಲಿನ ತೆರಿಗೆಯನ್ನು 7 ರೂಪಾಯಿ ಮತ್ತು ಡೀಸೆಲ್ ಮೇಲಿನ ತೆರಿಗೆ 2 ರೂಪಾಯಿ ಇಳಿಸಲು ನಿರ್ಧರಿಸಿದೆ. ಈ ಮೂಲಕ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ ₹12ರಷ್ಟು ಕಡಿತವಾಗಲಿದೆ.
ಇದನ್ನೂ ಓದಿ–ಕಡಿಮೆಯಾದ ಪೆಟ್ರೋಲ್, ಡೀಸೆಲ್ ದರ: ಅತಿ ಹೆಚ್ಚು ದರ ಇಳಿಕೆ
ಗುಜರಾತ್
ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆಯಲ್ಲಿ ಕೇಂದ್ರ ಘೋಷಿಸಿರುವ ಕಡಿತದ ಜೊತೆಗೆ ಗುಜರಾತ್ ಸರ್ಕಾರವು ಹೆಚ್ಚುವರಿಯಾಗಿ 7 ರೂಪಾಯಿ ತೆರಿಗೆ ಇಳಿಕೆ ಮಾಡುತ್ತಿರುವುದಾಗಿ ಪ್ರಕಟಿಸಿದೆ.
On behalf of all citizens of Gujarat, I express our gratitude to Hon’ble PM Shri @narendramodi for this special gift on the occasion of the festival of Diwali, by reducing the prices of Petrol by Rs 5 and Diesel by Rs 10, by reduction in excise duty : CM Shri @Bhupendrapbjp
— CMO Gujarat (@CMOGuj) November 3, 2021
ಮಣಿಪುರ
ಕೇಂದ್ರದ ಘೋಷಣೆಯ ಬೆನ್ನಲ್ಲೇ ಮಣಿಪುರ ಸಹ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ (ಬುಧವಾರ ರಾತ್ರಿ) ಅನ್ವಯವಾಗುವಂತೆ 7 ರೂಪಾಯಿ ಕಡಿತಗೊಳಿಸಿದೆ. ದೀಪಾವಳಿಯ ಸಂದರ್ಭದಲ್ಲಿ ಜನರಿಗೆ ಉಡುಗೊರೆಯ ರೀತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಂಡಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬಿರೆನ್ ಸಿಂಗ್ ಟ್ವೀಟಿಸಿದ್ದಾರೆ.
ಸಿಕ್ಕಿಂ
ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಲೀಟರ್‌ಗೆ 7 ರೂಪಾಯಿಯಷ್ಟು ಕಡಿಮೆ ಮಾಡುತ್ತಿರುವುದಾಗಿ ಪ್ರಕಟಿಸಿದ್ದಾರೆ. ಈ ಮೂಲಕ ಪ್ರತಿ ಲೀಟರ್ ಪೆಟ್ರೋಲ್ ₹12 ಮತ್ತು ಡೀಸೆಲ್ ₹17 ರೂಪಾಯಿ ಕಡಿಮೆಯಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.