ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಇಳಿಕೆ

7

ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಇಳಿಕೆ

Published:
Updated:

ಬೆಂಗಳೂರು: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರಗಳು ಪೈಸೆಗಳ ಲೆಕ್ಕದಲ್ಲಿ ಇಳಿಕೆಯಾಗುತ್ತಿವೆ.

ಬೆಂಗಳೂರಿನಲ್ಲಿ ಮಂಗಳವಾರ ಪ್ರತಿ ಲೀಟರ್‌ ಪೆಟ್ರೋಲ್‌ ದರ 13 ಪೈಸೆ ಮತ್ತು ಡೀಸೆಲ್‌ ದರ 7 ಪೈಸೆ ಇಳಿಕೆಯಾಗಿ, ಕ್ರಮವಾಗಿ ₹ 72.79 ಮತ್ತು ₹ 67.70ರಂತೆ ಮಾರಾಟವಾಗಿವೆ.

ರೂಪಾಯಿ ಚೇತರಿಕೆ: ಕರೆನ್ಸಿ ಮಾರುಕಟ್ಟೆಯಲ್ಲಿ ಎರಡು ದಿನಗಳಿಂದ ಇಳಿಮುಖವಾಗಿದ್ದ ರೂಪಾಯಿ ಮೌಲ್ಯ ಮಂಗಳ
ವಾರ 23 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 71.57ರಂತೆ ವಿನಿಮಯಗೊಂಡಿತು.

ಗುರುವಾರ ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ನಡೆಸಲಿದೆ. ಹೀಗಾಗಿ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದ್ದಾರೆ ಎಂದು ವರ್ತಕರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !