ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ತುಟ್ಟಿ

Last Updated 19 ಸೆಪ್ಟೆಂಬರ್ 2019, 10:42 IST
ಅಕ್ಷರ ಗಾತ್ರ

ಬೆಂಗಳೂರು: ಸೌದಿ ಅರೇಬಿಯಾದಲ್ಲಿ ಉಂಟಾಗಿರುವ ಕಚ್ಚಾ ತೈಲ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ.

ಬೆಂಗಳೂರಿನಲ್ಲಿ ಗುರುವಾರ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕ್ರಮವಾಗಿ 30 ಪೈಸೆ ಮತ್ತು 20 ಪೈಸೆ ಹೆಚ್ಚಾಗಿದೆ.ಮೂರು ದಿನಗಳಲ್ಲಿ ಪೆಟ್ರೋಲ್‌ 70 ಪೈಸೆ ಮತ್ತು ಡೀಸೆಲ್‌ ದರ 60 ಪೈಸೆಗಳಷ್ಟು ಏರಿಕೆಯಾಗಿದೆ. ಇದರಿಂದ ಪೆಟ್ರೋಲ್‌ ₹ 75.19 ಮತ್ತು ಡೀಸೆಲ್‌ ₹ 68.26ಕ್ಕೆ ತಲುಪಿದೆ.

ಸೌದಿ ಅರೇಬಿಯಾದ ತೈಲಾಗಾರಗಳ ಮೇಲೆ ಡ್ರೋನ್‌ ದಾಳಿ ನಡೆದಾಗಿನಿಂದ ಇಲ್ಲಿಯವರೆಗೆ ಅಂದರೆ ಬುಧವಾರದವರೆಗೆ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 85 ಪೈಸೆ ಮತ್ತು ಡೀಸೆಲ್‌ ಬೆಲೆ 76 ಪೈಸೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT