ಮಂಗಳವಾರ, ಆಗಸ್ಟ್ 16, 2022
20 °C

ಎರಡು ದಿನಗಳ ಬಳಿಕ ಮತ್ತೆ ಇಂಧನ ದರ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 16 ಪೈಸೆ ಹಾಗೂ ಡೀಸೆಲ್‌ ದರ 24 ಪೈಸೆ ಹೆಚ್ಚಿಸಿವೆ. ಇದರಿಂದಾಗಿ ಮಾರಾಟ ದರ ಪೆಟ್ರೋಲ್‌ ₹ 85.25 ಹಾಗೂ ಡೀಸೆಲ್‌ ₹ 77.01ಕ್ಕೆ ತಲುಪಿದೆ.

ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ₹ 89.02 ರಿಂದ ₹ 89.16ಕ್ಕೆ ಹಾಗೂ ಡೀಸೆಲ್‌ ದರ ₹ 78.97 ರಿಂದ ₹ 79.22ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ₹ 82.34 ರಿಂದ ₹ 82.49ಕ್ಕೆ ಹಾಗೂ ಡೀಸೆಲ್‌ ದರ ₹ 72.42 ರಿಂದ ₹ 72.65ಕ್ಕೆ ಏರಿಕೆ ಆಗಿದೆ.

ನವೆಂಬರ್ 30 ಮತ್ತು ಡಿಸೆಂಬರ್‌ 1ರಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಅದಕ್ಕೂ ಹಿಂದೆ ನವೆಂಬರ್‌ 20 ರಿಂದ ನವೆಂಬರ್ 29ರವರೆಗೆ (ನವೆಂಬರ್‌ 25ನ್ನು ಹೊರತುಪಡಿಸಿ) ದರ ಪರಿಷ್ಕರಣೆ ಮಾಡಲಾಗಿತ್ತು. ನವೆಂಬರ್‌ 25ರಂದು ಮಾತ್ರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಆಗಿರುವ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಇಂಧನ ದರದಲ್ಲಿ ಹೆಚ್ಚಳ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು