‘ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ’
ತುಮಕೂರು: ‘ಪೆಟ್ರೋಲ್, ಡೀಸೆಲ್ ದರ ಇದೇ ರೀತಿ ಏರಿಕೆ ಆಗುತ್ತಿದ್ದರೆ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ’ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಬಸ್‌ಗಳನ್ನು ನೀರಿನಿಂದ ಓಡಿಸಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು. ಡೀಸೆಲ್ ದರ ಏರಿಕೆ ಕಾರಣದಿಂದ ಬಸ್ ಪ್ರಯಾಣ ದರ ಸಹಜವಾಗಿ ಏರಲಿದೆ. ಸಂಸ್ಥೆ ನೌಕರರಿಗೆ ₹1,260 ಕೋಟಿ ವೇತನ ಬಾಕಿ ನೀಡಲಾಗುತ್ತಿದೆ. ಈಗಾಗಲೇ ಕೆಎಸ್‌ಆರ್‌ಟಿಸಿ ನಷ್ಟದಲ್ಲಿದೆ’ ಎಂದು ತಿಳಿಸಿದರು.