ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರವು ಶೇ 9ರಷ್ಟು ಹೆಚ್ಚಳ ಆಗಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸದ್ಯಕ್ಕೆ ಜಾಸ್ತಿ ಆಗಲಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರವು ಕಡಿಮೆ ಇದ್ದಾಗ ಕೇಂದ್ರ ಸರ್ಕಾರವು ತೈಲೋತ್ಪನ್ನಗಳ ಮಾರಾಟ ಕಂಪನಿಗಳಿಗೆ ತುಸು ಹೆಚ್ಚಿನ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಹೀಗಾಗಿ, ಈಗ ಕಚ್ಚಾ ತೈಲದ ಬೆಲೆ ಹೆಚ್ಚಾಗಿದ್ದರೂ ಅದನ್ನು ಗ್ರಾಹಕರಿಗೆ ವರ್ಗಾವಣೆ ಮಾಡಲು ಸರ್ಕಾರ ಅವಕಾಶ ಕೊಡಲಿಕ್ಕಿಲ್ಲ ಎಂದು ಮೂಲವೊಂದು ಹೇಳಿದೆ.

2022ರ ಏಪ್ರಿಲ್ನಿಂದ ಪೆಟ್ರೋಲ್, ಡೀಸೆಲ್ ಬೆಲೆಯು ದೇಶದಲ್ಲಿ ಬದಲಾವಣೆ ಆಗಿಲ್ಲ.

ಕಚ್ಚಾ ತೈಲದ ಬೆಲೆ ಏರಿಕೆಗೆ ಪ್ರತಿಯಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆ ಹೆಚ್ಚಾದ ಸಂದರ್ಭದಲ್ಲಿ ಭಾರತದಲ್ಲಿ ಬೆಲೆ ಜಾಸ್ತಿ ಆಗಿಲ್ಲ, ಜಾಗತಿಕ ಮಟ್ಟದಲ್ಲಿ ಬೆಲೆ ತಗ್ಗಿದಾಗಲೂ ಭಾರತದಲ್ಲಿ ಬೆಲೆ ಇಳಿಕೆ ಆಗಿಲ್ಲ.

ಈಗಿನ ಹಂತದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯ ಹೊರೆಯು ಗ್ರಾಹಕರಿಗೆ ವರ್ಗಾವಣೆ ಆಗದಂತೆ ನೋಡಿಕೊಳ್ಳುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆ ಎಂದು ಅಧಿಕಾರಿಗಳ ಮೂಲವೊಂದು ಹೇಳಿದೆ.

ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರವಾಗಿರುವ ಹೊತ್ತಿನಲ್ಲಿ ವಿರೋಧ ಪಕ್ಷಗಳ ಕೈಗೆ ಹೊಸ ಅಸ್ತ್ರವೊಂದನ್ನು ನೀಡುವ ಕೆಲಸವನ್ನು ಸರ್ಕಾರ ಮಾಡಲಿಕ್ಕಿಲ್ಲ ಎನ್ನಲಾಗಿದೆ.

ಸಚಿವರ ಸಭೆ: ಪಶ್ಚಿಮ ಏಷ್ಯಾದ ಪರಿಸ್ಥಿತಿ ವಿಷಮಗೊಂಡಿರುವ ಕಾರಣ ಕೇಂದ್ರ ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಅವರು ಕಚ್ಚಾ ತೈಲ, ಎಲ್ಪಿಜಿ ಮತ್ತು ಇತರ ಪೆಟ್ರೋಲಿಯಂ ಉತ್ಪನ್ನಗಳ ಲಭ್ಯತೆ ಕುರಿತು ಸೋಮವಾರ ಪರಿಶೀಲನೆ ನಡೆಸಿದರು. ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಕಂಪನಿಗಳ ಪ್ರತಿನಿಧಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

‘ಬದಲಾಗುತ್ತಿರುವ ಪರಿಸ್ಥಿತಿಯನ್ನು ನಾವು ನಿರಂತರ ವಾಗಿ ಅವಲೋಕಿಸುತ್ತಿದ್ದೇವೆ, ದೇಶದಲ್ಲಿ ಪ್ರಮುಖ ಪೆಟ್ರೋಲಿಯಂ ಉತ್ಪನ್ನಗಳು ಲಭ್ಯವಾಗುವಂತೆ, ಕೈಗೆಟಕು ವಂತೆ ಮಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದು ಸಚಿವಾಲಯವು ಎಕ್ಸ್ ಮೂಲಕ ತಿಳಿಸಿದೆ.

‘ಈ ಬಾರಿ ಆಗಿರುವಂತಹ ಬೆಲೆ ಏರಿಕೆಯನ್ನು ತಾಳಿಕೊಳ್ಳುವ ಸಾಮರ್ಥ್ಯವು ತೈಲೋತ್ಪನ್ನಗಳ ಮಾರಾಟ ಕಂಪನಿಗಳಿಗೆ ಇದೆ’ ಎಂದು ಮೂಲವೊಂದು ಹೇಳಿದೆ. ರಷ್ಯಾ–ಉಕ್ರೇನ್ ಸಮರ ಆರಂಭವಾದ ವೇಳೆ ಬ್ಯಾರೆಲ್ ಕಚ್ಚಾ ತೈಲದ ದರವು 119 ಡಾಲರ್ಗೆ ಜಿಗಿದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.