ಸೋಮವಾರ, ನವೆಂಬರ್ 18, 2019
25 °C

ಏರುಗತಿಯಲ್ಲಿ ಪೆಟ್ರೋಲ್, ಡೀಸೆಲ್ ದರ

Published:
Updated:

ಬೆಂಗಳೂರು: ಸೌದಿ ಅರೇಬಿಯಾದಲ್ಲಿ ಉಂಟಾಗಿರುವ ಕಚ್ಚಾ ತೈಲ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್ ದರ ಏರುಗತಿಯಲ್ಲಿ ಸಾಗುತ್ತಿದೆ. 

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದಿನದಿಂದ ದಿನಕ್ಕೆ ದರ ಏರಿಕೆ ಪ್ರಮಾಣವನ್ನು ಹೆಚ್ಚಿಸುತ್ತಲೇ ಇವೆ.

ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿ ಲೀಟರ್‌ ಪೆಟ್ರೋಲ್‌ ದರ 37 ಪೈಸೆ ಹೆಚ್ಚಾಗಿ ₹ 75.56 ಮತ್ತು ಡೀಸೆಲ್‌ ದರ 29 ಪೈಸೆ ಹೆಚ್ಚಗಿ ₹ 68.55ಕ್ಕೆ  ಏರಿಕೆಯಾಗಿದೆ.

ಸೌದಿ ಅರೇಬಿಯಾದ ತೈಲಾಗಾರಗಳ ಮೇಲೆ ಡ್ರೋನ್‌ ದಾಳಿ ನಡೆದಾಗಿನಿಂದ ಇಲ್ಲಿಯವರೆಗೆ ಅಂದರೆ ಶುಕ್ರವಾರದವರೆಗೆ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಕ್ರಮವಾಗಿ ₹ 1.52 ಮತ್ತು ಡೀಸೆಲ್‌ ದರದಲ್ಲಿ ₹1.25 ಏರಿಕೆಯಾಗಿದೆ.

ಪ್ರತಿಕ್ರಿಯಿಸಿ (+)